ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ನಲ್ಲಿ ಮಾಹಿತಿ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆಯೊಂದಕ್ಕೆ ಉತ್ತರೀಸಿದ ಬೊಮ್ಮಾಯಿ, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಶ್ರೇಣಿಯ ಸುಮಾರು 20,203 ರಷ್ಟು ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ. 2094 ಎಸ್ಐ, 1024 ಎಎಸ್ಐ, 1525 ಹೆಡ್ ಕಾನ್ಸ್ಟೇಬಲ್, 15,560 ಕಾನ್ಸ್ಟೇಬಲ್ ಹುದ್ದೆಗಳು ಭರ್ತಿಯಾಗಬೇಕಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಲಿಖಿತ ಮಾಹಿತಿಯನ್ನು ಗೃಹ ಸಚಿವರು ನೀಡಿದ್ದಾರೆ.
ಅದರಂತೆ ಪರಿಸ್ಥಿತಿಗೆ ಅನುಗುಣವಾಗಿ ಮಾಜಿ ಶಾಸಕರು, ಸಂಸದರು ಸೇರಿದಂತೆ ರಾಜ್ಯದ 247 ರಷ್ಟು ಗಣ್ಯರಿಗೆ ಪೊಲೀಸ್ ಭದ್ರತೆ ಒದಗಿಸಿ ಕೊಡುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.