ಬ್ರಹ್ಮಾವರ : ಇಲ್ಲಿ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿ, ಗ್ರಾಮವನ್ನು ಅಭಿವೃದ್ಧಿಯತ್ತ ಮುನ್ನಡೆಸಿದರೆ ಉತ್ತಮ ನಾಯಕರಾಗಲು ಸಾಧ್ಯ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹೇಳಿದರು.
ಅವರು ಸೋಮವಾರ ಬ್ರಹ್ಮಾವರ ಸಿಟಿಸೆಂಟರ್ನಕುಂಕುಮ್ ಸಭಾಂಗಣದಲ್ಲಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರದ ಆಶ್ರಯದಲ್ಲಿ ಸದಸ್ಯತ್ವ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸ್ಪರ್ಧಿಸಿದವರನ್ನು ಅಭಿನಂದಿಸಿ ಮಾತನಾಡಿದರು.
ಜನರು ರಾಜ್ಯದ ಬೆಳವಣಿಗೆಗೆ ದಿಕ್ಸೂಚಿ ನೀಡುವವರು. ಕಳೆದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಗರಿಷ್ಠಸದಸ್ಯರನ್ನು ಆಯ್ಕೆ ಮಾಡಿರುವುದು ಮುಂಬರುವ ತಾ.ಪಂ., ಜಿ.ಪಂ. ಜೊತೆಗೆ ವಿಧಾನಸಭಾ ಚುನಾವಣೆಗೆ ರಾಜ್ಯಮಟ್ಟದಲ್ಲಿ ಬದಲಾವಣೆ ಸೂಚನೆಯಾಗಿದೆ ಎಂದರು. ರೈತರಿಗೆ ಆತ್ಮಸ್ಥೈರ್ಯ ನೀಡಿ, ಇಡೀ ರಾಜ್ಯಕ್ಕೆ ಸಂದೇಶ ತಲುಪಿಸಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಆರ್.ಅಶೋಕ್ ಹೇಳಿದ್ದಾರೆ.
ಮಾಜಿ ಶಾಸಕ ಕೆ.ರಘುಪತಿ ಭಟ್ ಅಭಿನಂದನಾ ಭಾಷಣದಲ್ಲಿ, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೧೭ ಪಂಚಾಯತ್ಗಳಲ್ಲಿ ೧೧ ರಲ್ಲಿ ಬಿಜೆಪಿ ಬಹುಮತ ಸಾಧಿಸಿರುವುದು ಕರಾವಳಿ ಭಾಗದ ಜನ ಕಾಂಗ್ರೆಸ್ ನಿರ್ಲಕ್ಷಿಸುತ್ತಿರುವುದು ಸಾಕ್ಷಿ. ಪಂಚಾಯತ್ ಪ್ರತಿನಿಧಿಗಳು ಜನರ ವಿಶ್ವಾಸ ಉಳಿಸಬೇಕಿದೆ ಎಂದರು. ಉಡುಪಿ ನಗರ ಬಿಜೆಪಿ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ವಿ.ಸುನಿಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶ್ಯಾಮಲಾ ಕುಂದರ್, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ, ಬಿ.ಎನ್. ಶಂಕರ ಪೂಜಾರಿ, ಹರಿಮಕ್ಕಿ ರತ್ನಾಕರ ಶೆಟ್ಟಿ, ಜ್ಞಾನ ವಸಂತ ಶೆಟ್ಟಿ, ಸಂತೋಷ್ ಜತ್ತನ್, ನಿಶಾನ್ ರೈ, ಸುಮಿತ್ರಾ ನಾಯಕ್, ಗಿರೀಶ್ ಎಂ.ಅಂಚನ್, ಗಣೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬ್ರಹ್ಮಾವರನ್ನು ತಾಲೂಕು ಹಾಗೂ ಪುರಸಭೆಯನ್ನಾಗಿಸಿ ಮಾಡಿ ತಾಕತ್ತು ಪ್ರದರ್ಶಿಸಲಿ ಎಂದು ಕಾಂಗ್ರೆಸ್ಗೆ ಸವಾಲು ಹಾಕಿದರು. ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಕರ್ಜೆ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ, ದಯಾನಂದ ಉಗ್ಗೇಲ್ಬೆಟ್ಟು ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.