ನವದೆಹಲಿ: ಮುಂದಿನ ತಿಂಗಳು ಅಂದರೆ ಅಕ್ಟೋಬರ್ 28 ರಿಂದ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಘೋಷಣೆ ಮಾಡಿದ್ದಾರೆ.
ಅಕ್ಟೋಬರ್ 28 ರಂದು 71 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ, ಎರಡನೇ ಹಂತದಲ್ಲಿ 94 ಸ್ಥಾನಗಳಿಗೆ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ ಮತ್ತು ಮೂರನೇ ಹಂತದಲ್ಲಿ 78 ಸ್ಥಾನಗಳಿಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕೊರೋನಾವೈರಸ್ ಕಾರಣದಿಂದಾಗಿ ಬಿಹಾರ ಚುನಾವಣೆ ತಡವಾಗಿ ನಡೆಯುತ್ತಿದೆ.
ಮತದಾನದ ಸಮಯದ ಕುರಿತು ಕೆಲವು ರಾಜ್ಯಗಳು ಎದ್ದಿರುವ ವಿಷಯಗಳ ಕುರಿತು ಸೆಪ್ಟೆಂಬರ್ 29 ರಂದು ನಡೆಯಲಿರುವ ಪರಿಶೀಲನಾ ಸಭೆಯ ನಂತರ ಲೋಕಸಭೆಯ 1 ಮತ್ತು 64 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗಳನ್ನುನಡೆಸುವ ಬಗ್ಗೆ ನಿರ್ಧರಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.