ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸಂಬಂಧಿಸಿದಂತೆ ಈಗಾಗಲೇ 1,400 ಕ್ಕೂ ಅಧಿಕ ಕನ್ನಡ, ಉರ್ದು ಮಾಧ್ಯಮ ಶಾಲೆಗಳನ್ನು ರಾಜ್ಯ ಸರ್ಕಾರ ಗುರುತಿಸಿದೆ.
ಈ ಶಾಲೆಗಳಲ್ಲಿ ಮಕ್ಕಳಿಗೆ ಒಂದನೇ ತರಗತಿಯಿಂದಲೇ ಇಂಗ್ಲಿಷ್ ಭಾಷೆಯಲ್ಲಿ ಶಿಕ್ಷಣ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಶಾಲೆಗಳಲ್ಲಿ ಎರಡು ಭಾಷೆಗಳಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಒದಗಿಸಲಾಗುತ್ತದೆ ಎಂದೂ ಸರ್ಕಾರ ತಿಳಿಸಿದೆ. ಕನ್ನಡ ಮಾಧ್ಯಮದಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದರೆ ಕನ್ನಡ ಮತ್ತು ಆಂಗ್ಲ ಪಠ್ಯ ಪುಸ್ತಕಗಳನ್ನು ಮತ್ತು ಉರ್ದು ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದರೆ ಉರ್ದು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಗುವುದಾಗಿಯೂ ಸರ್ಕಾರ ತಿಳಿಸಿದೆ.
ಹಿಂದಿನ ಬಾರಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಇನ್ನಷ್ಟು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಮುಂದಾಗಿದೆ. ಆಂಗ್ಲ ಮಾಧ್ಯಮ ಆರಂಭಕ್ಕೆ ಈಗ ಸೇರ್ಪಡೆ ಮಾಡಲಾಗಿರುವ ಸರ್ಕಾರಿ ಶಾಲೆಗಳ ಮೂಲಕ ಸುಮಾರು ಪ್ರತಿ ತರಗತಿಗೆ 30 ರಂತೆ ಸುಮಾರು 42 ಸಾವಿರ ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಸರ್ಕಾರ ತಿಳಿಸಿದೆ. 224 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈ ಯೋಜನೆ ಜಾರಿಯಾಗಲಿದೆ ಎಂದು ಉನ್ನತ ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.