ನವದೆಹಲಿ: ಪರಸ್ಪರ ಸಹಕಾರ, ಬಾಂಧವ್ಯ ವೃದ್ಧಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಷೆ ನಡುವೆ ಶನಿವಾರ ಚರ್ಚೆ ನಡೆದಿದೆ.
ಪ್ರಮುಖ ಕ್ಷೇತ್ರಗಳಲ್ಲಿ ಉಭಯ ದೇಶಗಳ ಪರಸ್ಪರ ಸಹಕಾರದ ಬಗ್ಗೆ ನಾಯಕರುಗಳು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ವರ್ಚುವಲ್ ರೂಪದಲ್ಲಿ ಉಭಯ ನಾಯಕರ ನಡುವೆ ಮಾತುಕತೆ ನಡೆದಿದ್ದು, ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಶ್ರೀಲಂಕಾದ ಆಡಳಿತರೂಢ ಪಕ್ಷ ಸ್ಪಷ್ಟ ಬಹುಮತವನ್ನು ಗಳಿಸಿರುವುದು ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ವೃದ್ಧಿ ಮಾಡಲು ಸಹಾಯಕವಾಗಲಿದೆ ಎಂದು ಮೋದಿ ಆಶಿಸಿದರು.
“ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದ ಹೊಸ ಅಧ್ಯಾಯ ಆರಂಭಿಸುವ ಸುವರ್ಣ ಅವಕಾಶ ಸಿಕ್ಕಿದೆ. ಉಭಯ ದೇಶಗಳ ಜನರು ಕೂಡ ಇಂತಹ ಬೆಳವಣಿಗೆಯ ನಿರೀಕ್ಷೆಯನ್ನು ಮಾಡುತ್ತಿದ್ದಾರೆ” ಎಂದು ಮೋದಿ ಹೇಳಿದ್ದಾರೆ.
ಶ್ರೀಲಂಕಾದ ಸಮಗ್ರ ಅಭಿವೃದ್ಧಿಗೆ ಭಾರತವು ಸಹಕಾರವನ್ನು ನೀಡಲಿದೆ ಎಂದು ಮೋದಿ ಹೇಳಿದ್ದಾರೆ.ರಕ್ಷಣೆ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಉಭಯ ಮುಖಂಡರ ನಡುವೆ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಮಹಿಂದಾ ರಾಜಪಕ್ಷೆ ಅವರು ಶ್ರೀಲಂಕಾದ ಪ್ರಧಾನಿಯಾಗಿ ಆಗಸ್ಟ್ 9ರಂದು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.