ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಸಾಂಬೂರಾ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಇಬ್ಬರು ಭಯೋತ್ಪಾದಕರು ಸತ್ತಿದ್ದಾರೆ. ಸಂಹಾರವಾದ ಭಯೋತ್ಪಾದಕರ ಗುರುತು ಮತ್ತು ಅವರು ಯಾವ ಭಯೋತ್ಪಾದನಾ ಗುಂಪಿಗೆ ಸೇರಿದವರು ಎಂಬುದು ಇನ್ನೂ ಪತ್ತೆಯಾಗಿಲ್ಲ.
ವರದಿಗಳ ಪ್ರಕಾರ, ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸೇನೆಯ ಒರ್ವ ಯೋಧ ಕೂಡ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿಯಿಡೀ ಕಾರ್ಯಾಚರಣೆ ಮುಂದುವರಿದಿದೆ.
ಕೆಲವು ಭಯೋತ್ಪಾದಕರು ಇನ್ನೂ ಈ ಪ್ರದೇಶದಲ್ಲಿ ಅವಿತುಕೊಂಡಿದ್ದಾರೆ ಎಂಬ ಶಂಕೆ ಇದ್ದು, ಕಾರ್ಯಾಚರಣೆಯನ್ನು ಇನ್ನೂ ಮುಂದುವರೆಸಲಾಗುತ್ತಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, 50 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಪ್ರದೇಶದಲ್ಲಿ ಕೆಲವು ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ನೀಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ವ್ಯಾಪಕವಾಗಿ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಹಲವು ಉಗ್ರರರನ್ನು ಸಂಹಾರ ಮಾಡಲಾಗಿದೆ.
#AwantiporaEncounterUpdate: 01 more unidentified #terrorist killed (total 02). Search going on. Further details shall follow. @JmuKmrPolice https://t.co/tgUlq3xU5f
— Kashmir Zone Police (@KashmirPolice) September 27, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.