ನವದೆಹಲಿ: ಇತ್ತೀಚೆಗೆ ಸಂಸತ್ತು ಅಂಗೀಕರಿಸಿದ 2020 ರ ಜಮ್ಮು ಮತ್ತು ಕಾಶ್ಮೀರ ಅಧಿಕೃತ ಭಾಷಾ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿನ್ನೆ ಅಂಕಿತವನ್ನು ಹಾಕಿದ್ದಾರೆ.
ಈ ಕಾಯಿದೆಯು ಕಾಶ್ಮೀರಿ, ಡೋಗ್ರಿ, ಹಿಂದಿ, ಇಂಗ್ಲಿಷ್ ಮತ್ತು ಉರ್ದುಗಳನ್ನು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಅಧಿಕೃತ ಭಾಷೆಯನ್ನಾಗಿ ಮಾಡುತ್ತದೆ. ಈ ಮೊದಲು ಉರ್ದು ಮತ್ತು ಇಂಗ್ಲಿಷ್ ಮಾತ್ರ ಕೇಂದ್ರಾಡಳಿತ ಪ್ರದೇಶಕ್ಕೆ ಅಧಿಕೃತ ಭಾಷೆಯಾಗಿತ್ತು.
2011 ರ ಜನಗಣತಿಯ ಪ್ರಕಾರ, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಜನಸಂಖ್ಯೆಯು ಒಂದು ಕೋಟಿ 21 ಲಕ್ಷಕ್ಕಿಂತ ಹೆಚ್ಚಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಉರ್ದು ಮಾತನಾಡುವವರ ಸಂಖ್ಯೆ ತೀರಾ ಕಡಿಮೆ ಇದೆ.
ಮಾತ್ರವಲ್ಲದೇ ಸಂಸತ್ತು ಅಂಗೀಕರಿಸಿದ ಮೂರು ರೈತ ಮಸೂದೆಗಳಿಗೂ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ಕೃಷಿ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020 ಮತ್ತು ಬೆಲೆ ಭರವಸೆ ಮತ್ತು ರೈತ (ದತ್ತಿ ಮತ್ತು ಭದ್ರತೆ) ಒಪ್ಪಂದ ಮತ್ತು ಕೃಷಿ ಸೇವೆಗಳ ಮಸೂದೆ 2020 ಅನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಅದಕ್ಕೆ ರಾಷ್ಟ್ರಪತಿಗಳಿಂದ ಅನುಮೋದನೆಯೂ ಸಿಕ್ಕಿ ಕಾಯ್ದೆಯಾಗಿ ಪರಿವರ್ತನೆಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.