ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಇಂದು ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ಬೌದ್ಧಿಕ ಆಸ್ತಿ ಸಹಕಾರ ಕ್ಷೇತ್ರದಲ್ಲಿನ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಡೆನ್ಮಾರ್ಕ್ ಐಎಸ್ಎ ಅಂದರೆ ಅಂತರರಾಷ್ಟ್ರೀಯ ಸೌರ ಒಕ್ಕೂಟಕ್ಕೆ ಸೇರ್ಪಡೆಗೊಂಡಿರುವುದು ಶೃಂಗಸಭೆಯ ಮತ್ತೊಂದು ಪ್ರಮುಖ ಫಲಿತಾಂಶವಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಉಭಯ ದೇಶಗಳ ನಡುವಿನ ದೀರ್ಘಕಾಲದ ಸ್ನೇಹ ಸಂಬಂಧಗಳ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಸಂಬಂಧದ ವಿಶಾಲ ಚೌಕಟ್ಟನ್ನು ಸಮಗ್ರವಾಗಿ ಪರಿಶೀಲಿಸಲು ದ್ವಿಪಕ್ಷೀಯ ಶೃಂಗಸಭೆ ಉಭಯ ನಾಯಕರಿಗೆ ಅವಕಾಶವನ್ನು ನೀಡಿದೆ. ಭಾರತ ಮತ್ತು ಡೆನ್ಮಾರ್ಕ್ ನಡುವಿನ ಸರಕು ಮತ್ತು ಸೇವೆಗಳಲ್ಲಿನ ದ್ವಿಪಕ್ಷೀಯ ವ್ಯಾಪಾರವು 2016 ರಲ್ಲಿ ಇದ್ದ 2.82 ಬಿಲಿಯನ್ ಡಾಲರ್ಗಳಿಂದ ಈ ಬಾರಿ 30 ಪ್ರತಿಶತದಷ್ಟು ಹೆಚ್ಚಾಗಿದೆ ಮತ್ತು 2019 ರಲ್ಲಿ 3.68 ಬಿಲಿಯನ್ ಡಾಲರ್ಗಳಿಗೆ ಏರಿದೆ.
ಸಾಗಣೆ, ನವೀಕರಿಸಬಹುದಾದ ಇಂಧನ, ಪರಿಸರ, ಕೃಷಿ, ಆಹಾರ ಸಂಸ್ಕರಣೆ ಮತ್ತು ಸ್ಮಾರ್ಟ್ ನಗರಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು 200 ಡ್ಯಾನಿಶ್ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಿವೆ. ಹಲವಾರು ಪ್ರಮುಖ ಡ್ಯಾನಿಶ್ ಕಂಪನಿಗಳು ಮೇಕ್ ಇನ್ ಇಂಡಿಯಾ ಯೋಜನೆಯಡಿ ಹೊಸ ಉತ್ಪಾದನಾ ಕಾರ್ಖಾನೆಗಳನ್ನು ನಿರ್ಮಿಸಿವೆ. ಐಟಿ, ನವೀಕರಿಸಬಹುದಾದ ಇಂಧನ ಮತ್ತು ಎಂಜಿನಿಯರಿಂಗ್ನಲ್ಲಿ ಸುಮಾರು 25 ಭಾರತೀಯ ಕಂಪನಿಗಳು ಡೆನ್ಮಾರ್ಕ್ನಲ್ಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.