
ನವದೆಹಲಿ: ಆಮ್ನೆಸ್ಟಿ ಇಂಟರ್ನ್ಯಾಷನಲ್ ಮಾನವ ಹಕ್ಕುಗಳ ಸಂಸ್ಥೆ ಭಾರತದಲ್ಲಿ ತನ್ನ ವಹಿವಾಟುಗಳನ್ನು ನಿಲ್ಲಿಸುವ ಸಂಬಂಧ ಮಾಹಿತಿ ನೀಡಿದೆ. ಅಮ್ನೆಸ್ಟಿಗೆ ಸಂಬಂಧಿಸಿದಂತೆ ಇರುವ ಬ್ಯಾಂಕ್ ಖಾತೆಗಳನ್ನು ಸರ್ಕಾರ ನಿಷ್ಕ್ರಿಯಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಲ್ಲಿಸಲು ಮುಂದಾಗಿರುವುದಾಗಿ ತಿಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ತನ್ನ ವೆಬ್ಸೈಟ್ನಲ್ಲಿ ಪ್ರಕಟಣೆ ನೀಡಿದ್ದು, ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಭಾರತ ಸರ್ಕಾರ ಪೂರ್ಣವಾಗಿ ನಿಷ್ಕ್ರಿಯಗೊಳಿಸಿದೆ. ಈ ವಿಚಾರ ಸೆಪ್ಟೆಂಬರ್ 10, 2020ರಂದು ಸಂಸ್ಥೆಯ ಗಮನಕ್ಕೆ ಬಂದಿದೆ. ಈ ಕಾರಣದಿಂದ ಭಾರತದಲ್ಲಿ ಸಂಸ್ಥೆಯ ವ್ಯವಹಾರಗಳು ಸ್ಥಗಿತಗೊಂಡಿದೆ ಎಂದೂ ತಿಳಿಸಿದೆ.
ತಾನು ಭಾರತ ಮತ್ತು ಅಂತರರಾಷ್ಟ್ರೀಯ ನಿಯಮಗಳಿಗೆ ಬದ್ಧವಾಗಿರುವುದಾಗಿಯೂ ಸಂಸ್ಥೆ ಹೇಳಿದೆ.
ಕಳೆದ ವರ್ಷ ಸಂಸ್ಥೆಯ ಬೆಂಗಳೂರು ಕಛೇರಿ ಮೇಲೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕಳೆದ ನವೆಂಬರ್ ತಿಂಗಳಲ್ಲಿ ವಿದೇಶದಿಂದ ನಿಯಮ ಉಲ್ಲಂಘಿಸಿ ದೇಣಿಗೆ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಸಹ ದಾಳಿ ನಡೆಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


