ನವದೆಹಲಿ: ಕೊರೋನಾ ಸಂಕಷ್ಟ ಹೆಚ್ಚಳವಾಗುತ್ತಿರುವ ನಡುವೆಯೇ ಕೇಂದ್ರ ಆರೋಗ್ಯ ಸಚಿವಾಲಯ ಕೊಂಚ ನೆಮ್ಮದಿ ನೀಡುವ ವರದಿಯೊಂದನ್ನು ಪ್ರಕಟಿಸಿದೆ.
ಕಳೆದೊಂದು ತಿಂಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಚೇತರಿಕೆಯ ಪ್ರಮಾಣ 100% ಸಮೀಪ ಏರಿಕೆಯಾಗುತ್ತಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈಗಾಗಲೇ ದೇಶದಲ್ಲಿ 7 ಕೋಟಿಗೂ ಅಧಿಕ ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, 50 ಲಕ್ಷಕ್ಕೂ ಅಧಿಕ ಜನರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ 61 ಲಕ್ಷಕ್ಕೂ ಅಧಿಕ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ 50 ಲಕ್ಷಕ್ಕೂ ಅಧಿಕ ಸೋಂಕಿತರು ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆ ಮೂಲಕ ಚೇತರಿಕೆಯ ಪ್ರಮಾಣ 82% ದಷ್ಟು ಏರಿದ್ದು 100% ಗೆ ಸಮೀಪವಾಗಿದೆ ಎಂದು ತಿಳಿಸಿದೆ. ಸದ್ಯ ದೇಶದಲ್ಲಿ ಸುಮಾರು 10 ಲಕ್ಷಗಳಷ್ಟು ಸಕ್ರಿಯ ಕೊರೋನಾ ಪ್ರಕರಣಗಳಿದ್ದರೆ, 95 ಸಾವಿರದಷ್ಟು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಆಗಸ್ಟ್ ತಿಂಗಳಲ್ಲಿ 25.23 ಲಕ್ಷ ಜನರು ಗುಣಮುಖರಾಗಿದ್ದರು. ಸೆಪ್ಟೆಂಬರ್ ತಿಂಗಳ 17 ರಂದು 40 ಲಕ್ಷ ಜನರು ಚೇತರಿಸಿಕೊಂಡಿದ್ದರು. ಸೆ. 28 ರಂದು 50 ಲಕ್ಷಕ್ಕೂ ಅಧಿಕ ಜನರು ಚೇತರಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.