ನವದೆಹಲಿ: ದೇಶದ ಉತ್ತರ ಭಾಗದ ಲಡಾಖ್ ಗಡಿ ಪ್ರದೇಶದಲ್ಲಿ ಅತ್ತ ಶಾಂತಿಯೂ ಇಲ್ಲ, ಇತ್ತ ಯುದ್ಧವೂ ಇಲ್ಲ ಎಂಬ ಪರಿಸ್ಥಿತಿ ಇದೆ. ಇಂತಹ ಅಹಿತಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಬಧೌರಿಯಾ ತಿಳಿಸಿದ್ದಾರೆ.
ವಿಚಾರ ಸಂಕಿರಣವೊಂದರಲ್ಲಿ ಮಾತನಾಡಿದ ಅವರು ಲಡಾಖ್ಗೆ ಸಂಬಂಧಿಸಿದಂತೆ ಈ ವಿಚಾರವನ್ನು ತಿಳಿಸಿದ್ದಾರೆ. ಗಡಿಯಲ್ಲಿ ಎಂತಹ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ಭಾರತೀಯ ಸೇನೆ, ವಾಯುಪಡೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಿದೆ. ಚೀನಾದ ಜೊತೆಗೆ ಸಂಘರ್ಷ ನಡೆದರೆ ಅದಕ್ಕೆ ತಕ್ಕ ಪ್ರತಿದಾಳಿ ನಡೆಸಲೂ ಸೇನೆ ಸರ್ವಸಿದ್ಧ ಸನ್ನದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಜೊತೆಗೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಸೇನೆಯ ಬಲ ಹೆಚ್ಚಾಗಿದೆ. ಸೇನೆಯ ಬತ್ತಳಿಕೆಗೆ ಸಿ-17 ಗ್ಲೋಬ್ ಮಾಸ್ಟರ್, ರಫೇಲ್, ಚಿನೂಕ್ನಂತಹ ಯುದ್ಧ ವಿಮಾನಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳೂ ಸೇರಿದ್ದು, ಇದು ಯೋಧರ ಬಲವನ್ನು, ಸ್ಥೈರ್ಯ ಹೆಚ್ಚಿಸಿದೆ ಎಂದೂ ಬಧೌರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.