ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ನವದೆಹಲಿಯಲ್ಲಿ ನಡೆದ iDEX ಸಮಾರಂಭದಲ್ಲಿ ಡಿಫೆನ್ಸ್ ಇಂಡಿಯಾ ಸ್ಟಾರ್ಟ್ಅಪ್ ಚಾಲೆಂಜ್ (ಡಿಐಎಸ್ಸಿ 4)ಗೆ ಚಾಲನೆಯನ್ನು ನೀಡಿದ್ದಾರೆ. ಇನ್ನೋವೇಶನ್ಸ್ ಫಾರ್ ಡಿಫೆನ್ಸ್ ಎಕ್ಸಲೆನ್ಸ್ (iDEX) ಪರಿಸರ ವ್ಯವಸ್ಥೆಯ ಪರಿಧಿಯನ್ನು ವಿಸ್ತರಿಸುವ ಗುರಿಯನ್ನು ಇದು ಹೊಂದಿದೆ. ಈ ಸಂದರ್ಭದಲ್ಲಿ ಸಿಂಗ್ ಅವರು ಐಡಿಎಕ್ಸ್ 4 ಫೌಜಿ ಉಪಕ್ರಮ ಮತ್ತು ಉತ್ಪನ್ನ ನಿರ್ವಹಣಾ ವಿಧಾನ (ಪಿಎಂಎ) ಮಾರ್ಗಸೂಚಿಗಳನ್ನು ಪ್ರಾರಂಭಿಸಿದರು.
ಐಡೆಕ್ಸ್ 4 ಫೌಜಿ ಈ ಮಾದರಿಯ ಮೊದಲ ಉಪಕ್ರಮವಾಗಿದ್ದು, ಭಾರತೀಯ ಸಶಸ್ತ್ರ ಪಡೆಗಳ ಸದಸ್ಯರು ಗುರುತಿಸಿದ ಆವಿಷ್ಕಾರಗಳನ್ನು ಬೆಂಬಲಿಸುವ ಸಲುವಾಗಿ ಪ್ರಾರಂಭಿಸಲಾಗಿದೆ. ಇದು ಸೈನಿಕರು ಮತ್ತು ಕ್ಷೇತ್ರ ರಚನೆಗಳ ನಾವೀನ್ಯತೆಯ ಕಲ್ಪನೆಗಳನ್ನು ವೃದ್ಧಿಸಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಐಡೆಕ್ಸ್ ಉಪಕ್ರಮವು ದೇಶದಲ್ಲಿ ರಚಿಸಲಾದ ಅತ್ಯಂತ ಪರಿಣಾಮಕಾರಿ ಮತ್ತು ಉತ್ತಮವಾಗಿ ಕಾರ್ಯರೂಪಕ್ಕೆ ಬಂದ ರಕ್ಷಣಾ ಸ್ಟಾರ್ಟ್ಅಪ್ ಇಕೋ ಸಿಸ್ಟಮ್ ಆಗಿದೆ. ಆತ್ಮನಿರ್ಭರ ಭಾರತ ಅಭಿಯಾನದ ಮೂಲಕ ಸ್ವಾವಲಂಬನೆ ಸಾಧಿಸುವ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.
ರಕ್ಷಣಾ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಮುಂದಾಗಲು ವಿವಿಧ ಪಾಲುದಾರರನ್ನು ಒಟ್ಟುಗೂಡಿಸುವ ವಾತಾವರಣ ದೇಶದಲ್ಲಿ ಮೊದಲ ಬಾರಿಗೆ ಸೃಷ್ಟಿಯಾಗಿದೆ ಎಂದು ರಕ್ಷಣಾ ಸಚಿವರು ಹೇಳಿದರು. ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಅದನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಖಾಸಗಿ ವಲಯದ ಭಾಗವಹಿಸುವಿಕೆ ಸಹ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.