ನವದೆಹಲಿ: ಉತ್ತರಪ್ರದೇಶದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಸಂತ್ರಸ್ತ ಯುವತಿಯು ಸಾವಿಗೀಡಾಗಿರುವುದು ಜನರ ಆಕ್ರೋಶವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ತನಿಖಾ ತಂಡವು ಏಳು ದಿನದೊಳಗೆ ಪ್ರಕರಣದ ಬಗ್ಗೆ ವರದಿ ಸಲ್ಲಿಸಲಿದೆ ಮತ್ತು ವಿಚಾರಣೆಯು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ನಡೆಯಲಿದೆ ಎಂದಿದ್ದಾರೆ.
ಅತ್ಯಾಚಾರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿಗಳು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದ್ದಾರೆ. ಇದರಲ್ಲಿ ದಲಿತ ಸಮುದಾಯದ ಮಹಿಳಾ ಸದಸ್ಯರು ಮತ್ತು ಇತರ ಸದಸ್ಯರು ಇರಲಿದ್ದಾರೆ. ಅಲ್ಲದೆ ಗೃಹಕಾರ್ಯದರ್ಶಿ ಭಗವಾನ್ ಸ್ವರೂಪ್, ಡಿಐಜಿ ಚಂದ್ರಪ್ರಕಾಶ್ ಮುಂತಾದವರು ಇದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಯೂ ಮಾತುಕತೆ ನಡೆಸಿರುವುದಾಗಿ ಯೋಗಿ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಯೋಗಿ ಅವರ ಕಾರ್ಯಾಲಯ, “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹತ್ರಾಸ್ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆಯನ್ನು ನಡೆಸಲು ನಿರ್ದೇಶನ ನೀಡಿದ್ದಾರೆ” ಎಂದಿದ್ದಾರೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರು ಹತ್ರಾಸ್ ಘಟನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.