ನವದೆಹಲಿ: ದೇಶೀಯ ಬೂಸ್ಟರ್ ಮತ್ತು ಏರ್ಫ್ರೇಮ್ ಅನ್ನು ಒಳಗೊಂಡ ಬ್ರಹ್ಮೋಸ್ ಮೇಲ್ಮೈಯಿಂದ ಮೇಲ್ಮೈಗೆ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ವಿಜ್ಞಾನಿಗಳು ಮತ್ತು ಎಂಜಿನಿಯರ್ಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಭಿನಂದಿಸಿದ್ದಾರೆ.
ಯಶಸ್ವಿ ಪರೀಕ್ಷಾ ಉಡಾವಣೆಯೊಂದಿಗೆ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಯಶಸ್ವಿಯಾಗಿ ಉಡಾವಣೆಯಾಗುವ ಮೂಲಕ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ತನ್ನ ವರ್ಧಿತ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಮತ್ತು ಹೆಚ್ಚುವರಿ ಸ್ಥಳೀಯ ತಂತ್ರಜ್ಞಾನಗಳನ್ನು ಪ್ರದರ್ಶಿಸಿದೆ. ಈ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ಟ್ವೀಟ್ ನಲ್ಲಿ ಮೋದಿ ಹೇಳಿದ್ದಾರೆ.
ಈ ಅತ್ಯಾಧುನಿಕ ಶಸ್ತ್ರಾಸ್ತ್ರ ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ್ದಕ್ಕಾಗಿ ಭಾರತವು ಡಿಆರ್ಡಿಒ ಬಗ್ಗೆ ಅತ್ಯಂತ ಹೆಮ್ಮೆಪಡುತ್ತದೆ ಎಂದು ಶಾ ಹೇಳಿದ್ದಾರೆ.
ಈ ಅತ್ಯಾಧುನಿಕ ಶಸ್ತ್ರಾಸ್ತ್ರವು ಭಾರತದ ರಕ್ಷಣಾ ಸಾಮರ್ಥ್ಯ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ದೃಢನಿಶ್ಚಯಕ್ಕೆ ಸಾಕ್ಷಿಯಾಗಿದೆ.
Brahmos Supersonic Cruise Missile has achieved yet another milestone with successful test launch showcasing enhanced operational capabilities and additional indigenous technologies. Congratulations to all the scientists and engineers. @DRDO_India @BrahMosMissile
— Narendra Modi (@narendramodi) September 30, 2020
India is extremely proud of @DRDO_India for successfully testing the indigenously developed extended range BrahMos supersonic cruise missile. This state of the art weapon is a testimony of India’s defence potential and PM @NarendraModi ji’s resolve towards an #AatmaNirbharBharat.
— Amit Shah (@AmitShah) September 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.