ನವದೆಹಲಿ: ಕ್ರೀಡಾ ಸಚಿವ ಕಿರೆನ್ ರಿಜ್ಜು ಅವರು ಬುಧವಾರ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ (ಎಸ್ಎಐ) ಹೊಸ ಲೋಗೋವನ್ನು ಬಿಡುಗಡೆ ಮಾಡಿದ್ದಾರೆ. ದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹೊಸ ಲೋಗೋವನ್ನು ಅವರು ಅನಾವರಣಗೊಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕ್ರೀಡಾ ಕಾರ್ಯದರ್ಶಿ ರವಿ ಮಿತ್ತಲ್, ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ನರಿಂದರ್ ಬಾತ್ರಾ ಮತ್ತು ಎಸ್ಎಐ ಮಹಾನಿರ್ದೇಶಕ ಸಂದೀಪ್ ಪ್ರಧಾನ್ ಭಾಗವಹಿಸಿದ್ದರು. ಅನೇಕ ಪ್ರಸಿದ್ಧ ಕ್ರೀಡಾಪಟುಗಳು, ತರಬೇತುದಾರರು ಮತ್ತು ಇತರ ಕ್ರೀಡಾ ಉತ್ಸಾಹಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಾದ್ಯಂತದಿಂದ ಸಮಾರಂಭದಲ್ಲಿಸೇರಿಕೊಂಡರು.
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 1982 ರಲ್ಲಿ ಸ್ಥಾಪನೆಯಾದಾಗಿನಿಂದ ದೇಶದಲ್ಲಿ ಕ್ರೀಡಾ ಪರಿಸರ ವ್ಯವಸ್ಥೆಯ ಪ್ರಮುಖ ಕೇಂದ್ರವಾಗಿದೆ ಮತ್ತು ದೇಶಾದ್ಯಂತ ತಳಮಟ್ಟದ ಪ್ರತಿಭೆಗಳನ್ನು ಗುರುತಿಸುವಲ್ಲಿ ಮತ್ತು ಅವರ ಪ್ರತಿಭೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.
ಹೊಸ ಲೋಗೋವು ತಳಮಟ್ಟದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪೋಷಿಸಿ ದೇಶದಲ್ಲಿ ಕ್ರೀಡಾ ಉತ್ಕೃಷ್ಟತೆಯನ್ನು ಸೃಷ್ಟಿಸುವ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಪಯಣವನ್ನು ಪ್ರತಿಬಿಂಬಿಸಿದೆ.
सपनों की उड़ान!
The New SAI Logo depicts the platform to fulfill #Dream #Ambition and #Goal to become Champions for India 🇮🇳 pic.twitter.com/xM4CPxT7xi
— Kiren Rijiju (@KirenRijiju) September 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.