ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಉದ್ವಿಗ್ನತೆ ಏರ್ಪಟ್ಟಿರುವ ಈ ಸಂದರ್ಭದಲ್ಲಿ ಅಮೆರಿಕ ಮಹತ್ವದ ಹೇಳಿಕೆಯೊಂದನ್ನು ನೀಡಿದೆ. ಅರುಣಾಚಲ ಪ್ರದೇಶವನ್ನು ಸುಮಾರು ಆರು ದಶಕಗಳಿಂದ ಭಾರತದ ಭೂಪ್ರದೇಶವೆಂದು ಗುರುತಿಸಲಾಗಿದೆ ಮತ್ತು ಬೇರೆ ಯಾವುದೇ ದೇಶ ಅದರ ಮೇಲೆ ಹಕ್ಕು ಸಾಧಿಸುವ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಅಮೆರಿಕ ಗುರುವಾರ ಹೇಳಿದೆ. ಅದರ ಈ ಹೇಳಿಕೆ ಪರೋಕ್ಷವಾಗಿ ಚೀನಾವನ್ನು ಗುರಿಯಾಗಿಸಿದೆ.
“ಸುಮಾರು ಆರು ದಶಕಗಳಿಂದ ಯುಎಸ್ ಅರುಣಾಚಲ ಪ್ರದೇಶವನ್ನು ಭಾರತೀಯ ಪ್ರದೇಶವೆಂದು ಗುರುತಿಸಿದೆ. ವಾಸ್ತವ ನಿಯಂತ್ರಣ ರೇಖೆಯ ವ್ಯಾಪ್ತಿಯಲ್ಲಿ ಮಿಲಿಟರಿ ಅಥವಾ ನಾಗರಿಕರ ಆಕ್ರಮಣಗಳ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಮುನ್ನಡೆಸುವ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ”ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
“ಗಡಿ ವಿವಾದಗಳನ್ನು ಭಾರತ ಮತ್ತು ಚೀನಾ ಪ್ರಸ್ತುತ ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಮಾಧ್ಯಮಗಳನ್ನು ಬಳಸಿ ಚರ್ಚಿಸಿ ಬಗೆಹರಿಸಬೇಕು ಎಂದು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಮಿಲಿಟರಿ ಬಲವನ್ನು ಆಶ್ರಯಿಸಬಾರದು” ಎಂದು ಅಧಿಕಾರಿ ಹೇಳಿದ್ದಾರೆ.
ದಕ್ಷಿಣ ಮತ್ತು ಪೂರ್ವ ಚೀನಾ ಸಮುದ್ರಗಳಲ್ಲಿನ ಪ್ರಾದೇಶಿಕ ಮತ್ತು ಕಡಲ ಹಕ್ಕುಗಳ ಅನ್ವೇಷಣೆಯಲ್ಲಿ ಚೀನಾ ಬಲವಂತದ ತಂತ್ರಗಳನ್ನು ಬಳಸುತ್ತಿದೆ ಎಂದು ಪೆಂಟಗನ್ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.