ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಲೇ ಇದೆ. ಜೊತೆಗೆ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಕಾಳಜಿಯಿಂದ ಹೆಚ್ಚೆಚ್ಚು ಕೊರೋನಾ ಮಾದರಿಗಳ ಪರೀಕ್ಷೆ ನಡೆಯುತ್ತಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 96,588 ಜನರಿಗೆ ಕೊರೋನಾ ಮಾದರಿ ಪರೀಕ್ಷೆ ನಡೆಸಿದೆ. ಇದು ಈವರೆಗೆ ನಡೆಸಲಾದ ಪರೀಕ್ಷೆಗಳಲ್ಲೇ ಗರಿಷ್ಠ ಸಂಖ್ಯೆಯದ್ದಾಗಿದೆ ಎಂದೂ ಮೂಲಗಳು ತಿಳಿಸಿವೆ.
ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚಾದಂತೆ ರಾಜ್ಯದಲ್ಲಿ ಪರೀಕ್ಷೆಗಳ ಪ್ರಮಾಣವನ್ನು ಹೆಚ್ಚಿಸಲಾಗಿದೆ. ದಿನಕ್ಕೆ 30 ಸಾವಿರಗಳಷ್ಟಾಗುತ್ತಿದ್ದ ಕೊರೋನಾ ಆರ್ಟಿಪಿಸಿಆರ್ ಪರೀಕ್ಷೆಯನ್ನು 49 ಸಾವಿರಕ್ಕೆ ಏರಿಸಲಾಗಿದೆ. ಈ ವರೆಗೆ ರಾಜ್ಯದಲ್ಲಿ 49.97 ಲಕ್ಷ ಜನರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎಂದೂ ವರದಿಗಳು ಮಾಹಿತಿ ನೀಡಿವೆ. ಈವರೆಗೆ 6.11 ಲಕ್ಷ ಕ್ಕೆ ಸೋಂಕಿತರ ಪ್ರಮಾಣ ಏರಿಕೆ ಕಂಡಿದೆ ಎಂದೂ ವರದಿಗಳು ತಿಳಿಸಿವೆ.
ಸೋಂಕಿನಿಂದಾಗಿ ರಾಜ್ಯದಲ್ಲಿ ಈ ವರೆಗೆ ಸುಮಾರು 9 ಸಾವಿರ ಮಂದಿ ಮೃತಪಟ್ಟಿದ್ದಾರೆ. 4.92 ಲಕ್ಷಕ್ಕೂ ಅಧಿಕ ಮಂದಿ ಚೇತರಿಸಿಕೊಂಡಿದ್ದಾರೆ. 1.10 ಲಕ್ಷ ಗಳಷ್ಟು ಸಕ್ರಿಯ ಪ್ರಕರಣಗಳಿವೆ. 811 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದೂ ವರದಿಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.