ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಭದ್ರವಾಗಿ ನೆಲೆಯೂರಲು ಪ್ರಯತ್ನ ನಡೆಸುತ್ತಿರುವ ಬಿಜೆಪಿ 2021ರಲ್ಲಿ ನಡೆಯಲಿರುವ ಅಲ್ಲಿನ ವಿಧಾನಸಭೆ ಚುನಾವಣೆಯ ನೇತೃತ್ವವನ್ನು ಕೇಂದ್ರ ಗೃಹಸಚಿವ, ಸಂಘಟನಾ ಚತುರ ಅಮಿತ್ ಶಾ ಅವರ ಹೆಗಲಿಗೆ ಏರಿಸಲು ಸಜ್ಜಾಗಿದೆ.
ಅಮಿತ್ ಶಾ ಅವರ ದುರ್ಗಾಪೂಜೆಗೂ ಮುನ್ನ ಇದೇ ತಿಂಗಳು ಪಶ್ಚಿಮ ಬಂಗಾಳಕ್ಕೆ ತೆರಳಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪಶ್ಚಿಮಬಂಗಾಳದ ನೇತೃತ್ವವನ್ನು ಶಾ ಅವರಿಗೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಗೆದ್ದು ಟಿಎಂಸಿ ಮತ್ತು ಎಡಪಂಥೀಯ ಪಕ್ಷಗಳಿಗೆ ಸೆಡ್ಡು ಕೊಡುವ ಉತ್ಸಾಹದಲ್ಲಿದೆ. ಹೀಗಾಗಿ ಅಮಿತ್ ಶಾ ಅವರಿಗೆ ಪಕ್ಷದ ಸಂಪೂರ್ಣ ಜವಾಬ್ದಾರಿಯನ್ನು ವಹಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ 18 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.