ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ದಿನೇ ದಿನೇ ಏರುತ್ತಲೇ ಇದೆ. ಒಂದು ಕಡೆಯಲ್ಲಿ ಸರ್ಕಾರ ಕೊರೋನಾ ನಿಯಂತ್ರಿಸಲು ಪೂರಕ ಕ್ರಮ ಕೈಗೊಳ್ಳುತ್ತಿದ್ದರೆ, ಇನ್ನೊಂದೆಡೆ ಕೆಲವು ಜನರು ಮಾತ್ರ ಯಾವುದೇ ಮುನ್ನೆಚ್ಚರಿಕೆ, ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರವಂತೂ ಪಾಲನೆ ಆಗುತ್ತಿಲ್ಲ.
ಇದೆಲ್ಲವನ್ನೂ ಗಮನಿಸಿದ ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಧರಿಸದೆ ಮನೆಯಿಂದ ಹೊರಬಂದಲ್ಲಿ, ಸಾರ್ವಜನಿಕವಾಗಿ ಕಾಣಿಸಿಕೊಂಡಲ್ಲಿ ಅಂತಹವರಿಗೆ ದಂಡ ಹಾಕಲು ಕ್ರಮ ಕೈಗೊಂಡಿದೆ. ನಗರ ಪ್ರದೇಶದಲ್ಲಿ ಮಾಸ್ಕ್ ಇಲ್ಲದೇ ಓಡಾಡುವವರಿಗೆ 1000 ರೂ. ದಂಡ ಮತ್ತು ಗ್ರಾಮೀಣ ಭಾಗದಲ್ಲಿ ಮಾಸ್ಕ್ ರಹಿತ ಓಡಾಟಕ್ಕೆ 500 ರೂ. ಗಳ ದಂಡವನ್ನು ವಿಧಿಸಲು ನಿರ್ಧರಿಸಿದೆ.
ಕೊರೋನಾದಿಂದ ನಮ್ಮನ್ನು ನಾವು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮಾಸ್ಕ್ ಮುಖ್ಯ ಪಾತ್ರ ವಹಿಸುತ್ತಿದ್ದು, ಸಾರ್ವಜನಿಕ ಪ್ರದೇಶಗಳು, ಕಛೇರಿಗಳು, ಸಾರಿಗೆ ಸಂಚಾರ ಸೇರಿದಂತೆ ಎಲ್ಲಾ ಸಾರ್ವಜನಿಕ ವ್ಯವಸ್ಥೆಯಲ್ಲಿ ಭಾಗವಹಿಸುವಾಗಲೂ ಮಾಸ್ಕ್ ಕಡ್ಡಾಯ ಎಂದು ತಿಳಿಸಿದೆ. ಜೊತೆಗೆ ಅವಕಾಶವಿದ್ದಲ್ಲಿ ವರ್ಕ್ ಫ್ರಂ ಹೋಂ ಅನ್ನು ಆಯ್ಕೆ ಮಾಡುವಂತೆ ಇಲಾಖೆ ಸೂಚಿಸಿದೆ. ಜೊತೆಗೆ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವಾಗ ಸ್ಥಳದಲ್ಲಿ ಸ್ಯಾನಿಟೈಸಿಂಗ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಕೊರೋನಾ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಇಲಾಖೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.