ಛತ್ತೀಸ್ಗಢ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲ್ ನಾಯಕನನ್ನು ಆತನ ತಂಡದ ಸದಸ್ಯರೇ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮೃತ ನಕ್ಸಲ್ ಅನ್ನು ಬಿಜಾಪುರ ಜಿಲ್ಲೆಯ ವಿಭಾಗಿಯ ನಕ್ಸಲ್ ಸಮಿತಿ ಸದಸ್ಯ ಮೋಡಿಯಂ ವಿಜ್ಜಾ ಎಂದು ಗುರುತಿಸಲಾಗಿದೆ. ಈತ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ. ಈತನ ತಂಡದಲ್ಲಿ ಭಿನ್ನಾಭಿಪ್ರಾಯಗಳು ತಲೆದೋರಿತ್ತು, ಇದುವೇ ಈತನ ಹತ್ಯೆಗೆ ಕಾರಣ ಎಂದು ಹೇಳಲಾಗಿದೆ.
ದಕ್ಷಿಣ ಬಸ್ತಾರ್ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ನಾಗರಿಕ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಇದಕ್ಕೆ ನಕ್ಸಲರು ಕಾರಣ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲ್ ತಂಡಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡಿರುವುದು ಮತ್ತು ನಕ್ಸಲ್ ನಾಯಕನ ಹತ್ಯೆಯಾಗಿರುವುದು ಪ್ರಮುಖ ಬೆಳವಣಿಗೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಹೇಳಿದ್ದಾರೆ.
ಮೃತಪಟ್ಟವವನು ಪೊಲೀಸರಿಗೆ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ. ಈತನನ್ನು ಹುಡುಕಿಕೊಟ್ಟವರಿಗೆ 8 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆಯನ್ನೂ ಮಾಡಲಾಗಿತ್ತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.