ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಜ್ಪೆಯ ಪುನಶ್ಚೇತನಕ್ಕೆ ಆಗ್ರಹಿಸಿ ತುಳುವಾಸ್ ಕೌನ್ಸಿಲ್, ಜೈ ತುಳುನಾಡ್ ಸಂಘಟನೆ ಸೇರಿದಂತೆ ಇನ್ನಿತರ ಸಂಘಟನೆಗಳು ಅಕ್ಟೋಬರ್ 4 ರಿಂದ #FlyFromIXE ಹ್ಯಾಷ್ ಟ್ಯಾಗ್ ಬಳಸಿ ಟ್ವಿಟರ್ ಅಭಿಯಾನ ನಡೆಸಲಿವೆ.
ಈ ವಿಮಾನ ನಿಲ್ದಾಣದಲ್ಲಿ ದೇಶೀಯ ಮಟ್ಟದಲ್ಲಿ ಮತ್ತು ಅಂತರರಾಷ್ಟ್ರೀಯ ವಿಮಾನ ಸಂಚಾರಗಳನ್ನು ಹೆಚ್ಚಿಸಬೇಕು. ಉಡಾನ್ ಯೋಜನೆಯೊಳಗೆ ಮಂಗಳೂರು ವಿಮಾನ ನಿಲ್ದಾಣವನ್ನು ಸೇರಿಸಿ ಹೆಚ್ಚಿನ ಪ್ರಾದೇಶಿಕ ಸ್ಥಳಗಳಿಗೆ ಸಂಪರ್ಕ ನಿರ್ಮಾಣ ಮಾಡಬೇಕು. ಇದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳ ಮತ್ತು ಇಲಾಖೆಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುವುದು ಎಂದು ಸಂಘಟನೆಗಳು ತಿಳಿಸಿವೆ.
ಕಣ್ಣೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದ ನಂತರ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಅಂತರರಾಷ್ಟ್ರೀಯ ವಿಮಾನಗಳ ಸಂಚಾರ ಕಡಿಮೆಯಾಗಲಿವೆ. ಮೂಲ ಸೌಕರ್ಯ, ಅಭಿವೃದ್ಧಿ ಕೆಲಸಗಳು, ಸ್ಥಳೀಯ ಬೇಡಿಕೆಗಳ ಈಡೇರಿಕೆಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇದರಿಂದ ಮಂಗಳೂರು ಆಸುಪಾಸಿನ ಜನತೆ ಮುಂದಿನ ದಿನಗಳಲ್ಲಿ ಬೇರೆ ವಿಮಾನ ನಿಲ್ದಾಣಗಳನ್ನು ಅವಲಂಬಿಸಬೇಕಾಗಬಹುದು ಎಂಬ ಆತಂಕವನ್ನು ಸಂಘಟನೆಗಳು ವ್ಯಕ್ತಪಡಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.