ಭುವನೇಶ್ವರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸುಧಾರಣಾ ಮಸೂದೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಪ್ರಧಾನಿ ನರೇಂದ್ರ ಮೋದಿ ಇರುವವರೆಗೆ ಕನಿಷ್ಠ ಬೆಂಬಲ ಬೆಲೆಯನ್ನು ವಾಪಸ್ ಪಡೆಯುವ ಮಾತೇ ಇಲ್ಲ ಎಂದಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ರೈತರಿಗೆ ವಂಚನೆ ಮಾಡಿದವರು ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದಿದ್ದಾರೆ.
“ನರೇಂದ್ರ ಮೋದಿ ಅವರು ಅಧಿಕಾರದಲ್ಲಿ ಇರುವವರೆಗೆ ಕನಿಷ್ಠ ಬೆಂಬಲ ಬೆಲೆ ವಾಪಸ್ ಪಡೆಯುವ ಪ್ರಶ್ನೆಯೇ ಇರುವುದಿಲ್ಲ. ರೈತರನ್ನು ಸ್ವಾವಲಂಬಿಯಾಗಿ ಮಾಡಲು ಸರಕಾರವು ಕೃಷಿ ಮೂಲಸೌಕರ್ಯ ನಿಧಿಗೆ 1 ಲಕ್ಷ ಕೋಟಿ ರೂಪಾಯಿಗಳನ್ನು ವಿನಿಯೋಗ ಮಾಡುತ್ತಿದೆ. ಹಿಂದೆ ರೈತರಿಗೆ ವಂಚನೆ ಮಾಡಿದವರು ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಜನರನ್ನು ತಪ್ಪುದಾರಿಗೆ ತರುವ ಅವರ ಪ್ರಯತ್ನ ಸಫಲವಾಗುಲು ಸಾಧ್ಯವೇ ಇಲ್ಲ” ಎಂದಿದ್ದಾರೆ.
ಸ್ವಾತಂತ್ರ್ಯ ದೊರೆತ 70 ವರ್ಷಗಳ ಬಳಿಕವೂ ಕೃಷಿ ವಲಯದಲ್ಲಿ ಬದಲಾವಣೆ ಆಗಿಲ್ಲ. ಮುಕ್ತ ಮಾರುಕಟ್ಟೆ ನೀತಿ ಇದನ್ನು ಬದಲಾಯಿಸಲು ಪರಿಚಯಿಸಲಾಗಿದೆ. ಇದರಿಂದ ರೈತರಿಗೆ ಅವರ ಬೆಳೆಗೆ ತಕ್ಕ ಬೆಲೆ ಸಿಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.