ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ತಾಳದಿರಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕೊರೋನಾ ಸೋಂಕಿನಿಂದ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳುವುದು ನಮ್ಮ ಆದ್ಯತೆಯಾಗಿರಲಿ. ಕೊರೋನಾ ದಿನದಿಂದ ದಿನಕ್ಕೆ ಹೊಸ ಹೊಸ ಅವತಾರಗಳನ್ನು ತಳೆಯುತ್ತಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕಿನಿಂದ ರಕ್ಷಣೆ ಪಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಚಿಂತಿಸಬೇಕಾಗಿದೆ. ಎಚ್ಚರಿಕೆ ವಹಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ, ರಾಜ್ಯ ಸರ್ಕಾರಗಳು ಈಗಾಗಲೇ ಕೊರೋನಾ ಸೋಂಕು ತಡೆಗೆ ತೆಗೆದುಕೊಳ್ಳಬೇಕಾದ ಅಗತ್ಯ ನಿಯಂತ್ರಣ ನಿಯಮಗಳನ್ನು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅವೆಲ್ಲವನ್ನೂ ಪಾಲಿಸುವ ಮೂಲಕ, ಮಾಸ್ಕ್ ಅನ್ನು ಧರಿಸುವ ಮೂಲಕ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕೊರೋನಾ ಕಪಿಮುಷ್ಠಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ, ಎಚ್ಚರಿಕೆಯಿರಲಿ.
ಸೋಂಕಿನಿಂದ ರಕ್ಷಣೆಯೇ ನಮ್ಮ ಆದ್ಯತೆಯಾಗಿರಲಿ. ಸಾರ್ವಜನಿಕರು ಎಲ್ಲಾ ಸುರಕ್ಷತಾ ಕ್ರಮಗಳನ್ನು, ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಿ ಸಹಕರಿಸಬೇಕು. ಸರಿಯಾಗಿ ಮಾಸ್ಕ್ ಧರಿಸಿ, ಭೌತಿಕ ಅಂತರ, ನೈರ್ಮಲ್ಯ ಪಾಲನೆ ಅತ್ಯಗತ್ಯ. ನಾವೆಲ್ಲರೂ ಜೊತೆಯಾಗಿ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ. pic.twitter.com/e6qrLqqL3H
— B.S. Yediyurappa (@BSYBJP) October 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.