ನವದೆಹಲಿ: ಮುಂದಿನ ವರ್ಷದ ಅಂದರೆ 2021 ಜುಲೈ ವೇಳೆಗೆ ಕೊರೋನಾ ಚಿಕಿತ್ಸೆಗಾಗಿ ಅಂದಾಜು 40 ರಿಂದ 50 ಡೋಸ್ ಲಸಿಕೆ ಲಭ್ಯವಿರಲಿದ್ದು, ಸುಮಾರು 20-25 ಕೋಟಿ ಜನರಿಗೆ ಈ ಲಸಿಕೆಗಳನ್ನು ನೀಡಬಹುದಾಗಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಅಕ್ಟೋಬರ್ ಅಂತ್ಯದೊಳಗೆ ದೇಶದ ಎಲ್ಲಾ ರಾಜ್ಯಗಳೂ ಆದ್ಯತೆ ಮೇರೆಗೆ ಲಸಿಕೆ ಬೇಕಾಗಿರುವ ಜನರ ಪಟ್ಟಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆಯೂ ಅವರು ತಿಳಿಸಿದ್ದಾರೆ. ಈ ಲಸಿಕೆಯನ್ನು ಎಲ್ಲಾ ವಿಧಗಳಲ್ಲಿಯೂ ಪರಿಣಿತಿ ಪಡೆದಿರುವ ತಜ್ಞರ ತಂಡ ಪರಿಶೀಲನೆ ನಡೆಸಲಿದೆ. ಕೊರೋನಾ ಸೇವೆಯಲ್ಲಿ ನಿರತರಾಗಿರುವ ಆರೋಗ್ಯ ಸೇವಕರಿಗೆ ಸಹ ಈ ಲಸಿಕೆಯನ್ನು ಆದ್ಯತೆಯ ಆಧಾರದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇನ್ನು ಈ ಸಂಬಂಧ ರಾಜ್ಯ ಸರ್ಕಾರಗಳು ಜನರ ಪಟ್ಟಿಯನ್ನು ಸಲ್ಲಿಸಲು ಪೂರಕವಾದ ನಮೂನೆಯನ್ನು ಕೇಂದ್ರ ಸರ್ಕಾರವೇ ನೀಡಲಿದೆ ಎಂದು ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಈ ಆದ್ಯತಾ ಪಟ್ಟಿಯಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯದ ಅಧಿಕಾರಿಗಳು, ನರ್ಸ್ಗಳು ಅರೆವೈದ್ಯಕೀಯ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ಆಶಾ ಕಾರ್ಯಕರ್ತರು ಮತ್ತು ಕಣ್ಗಾವಲು ಅಧಿಕಾರಿಗಳು ಸೇರಿದ್ದಾರೆ ಎಂದೂ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಈ ಪಟ್ಟಿ ತಯಾರಿಕಾ ಪ್ರಕ್ರಿಯೆ ಇದೇ ತಿಂಗಳಾಂತ್ಯಕ್ಕೆ ಸಂಪೂರ್ಣವಾಗಲಿದೆ. ಇದರಲ್ಲಿ ಬ್ಲಾಕ್ ಮಟ್ಟದಲ್ಲಿ ಒದಗಿಸಲಾದ ಮೂಲಸೌಲಭ್ಯಗಳ ಕುರಿತಂತೆ ಮಾಹಿತಿ ನೀಡಬೇಕು ಎಂದೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಅಲ್ಲದೆ ಈ ಲಸಿಕೆಯ ರೋಗ ನಿರೋಧಕ ಶಕ್ತಿಯ ಬಗೆಗೂ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಲಿದೆ. ಇದನ್ನು ಎಲ್ಲರಿಗೂ ದೊರಕುವಂತೆ ನ್ಯಾಯಸಮ್ಮತವಾಗಿ ಮತ್ತು ಪಾರದರ್ಶಕವಾಗಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಪ್ರಕ್ರಿಯೆ ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ನೇತೃತ್ವದಲ್ಲಿ ನಡೆಯುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.