ನವದೆಹಲಿ: ದೇಶದ ಕೋವಿಡ್-19 ಚೇತರಿಕೆ ಪ್ರಮಾಣವು ಶೇಕಡಾ 84.34 ಕ್ಕೆ ತಲುಪಿದೆ ಎಂದು ಸರ್ಕಾರ ಇಂದು ಹೇಳಿದೆ. ಕಳೆದ 24 ಗಂಟೆಗಳಲ್ಲಿ 76 ಸಾವಿರಕ್ಕೂ ಹೆಚ್ಚು ಕೋವಿಡ್ ರೋಗಿಗಳು ಚೇತರಿಸಿಕೊಂಡಿದ್ದಾರೆ.
ಒಟ್ಟು ಚೇತರಿಕೆ ಸಂಖ್ಯೆ 55 ಲಕ್ಷ 86 ಸಾವಿರಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನಿರಂತರವಾಗಿ ಹೆಚ್ಚುತ್ತಿರುವ ಚೇತರಿಕೆ ದೇಶದ ಸಕ್ರಿಯ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಿದೆ ಮತ್ತು ಪ್ರಸ್ತುತ ಒಟ್ಟು ಸಕಾರಾತ್ಮಕ ಪ್ರಕರಣಗಳಲ್ಲಿ ಕೇವಲ 14.11 ಶೇಕಡಾವನ್ನು ಮಾತ್ರ ಸಕ್ರಿಯ ಪ್ರಕರಣಗಳು ಹೊಂದಿದೆ ಎಂದು ಖಚಿತಪಡಿಸಿದೆ. ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂಬತ್ತು ಲಕ್ಷ 34 ಸಾವಿರ. ಪ್ರಸ್ತುತ, ಭಾರತದ ಕೋವಿಡ್ ಸಾವಿನ ಪ್ರಮಾಣವು ಶೇಕಡಾ 1.55 ರಷ್ಟಿದೆ, ಇದು ಜಾಗತಿಕವಾಗಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ.
ಕಳೆದ 24 ಗಂಟೆಗಳಲ್ಲಿ, 74 ಸಾವಿರ 442 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆಯನ್ನು 66 ಲಕ್ಷ 23 ಸಾವಿರಕ್ಕೆ ತೆಗೆದುಕೊಂಡು ಹೋಗಿದೆ ಎಂದು ವರದಿಯಾಗಿದೆ. ಕೇಂದ್ರದ ಕಾರ್ಯತಂತ್ರದ ಮತ್ತು ಶ್ರೇಣೀಕೃತ ಟೆಸ್ಟ್-ಟ್ರ್ಯಾಕ್-ಟ್ರೀಟ್ ವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಹೆಚ್ಚಿನ ಚೇತರಿಕೆ ಮತ್ತು ಕಡಿಮೆ ಸಾವು ಸಂಭವಿಸುತ್ತಿದೆ ಎಂದು ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ, 903 ಸಾವುಗಳು ದೇಶದಲ್ಲಿ ಸಂಭವಿಸುತ್ತಿದ್ದು, ಒಟ್ಟು ಸಾವಿನ ಸಂಖ್ಯೆ 1, 2, 685 ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.