ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ದಕ್ಷಿಣ ಕಾಶ್ಮೀರದ ಪಂಪೋರ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರಿಗೆ ಗಾಯಗಳಾಗಿತ್ತು, ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಮಾರ್ಗಮಧ್ಯೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಘಟನೆ ನಡೆದ ಬಳಿಕ ಭದ್ರತಾ ಸಿಬ್ಬಂದಿಗಳು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಲ್ಲಿಸಿದ್ದಾರೆ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
Jammu and Kashmir: Five CRPF jawans injured after terrorists fired upon road opening party (ROP) of CRPF at Pampore bypass. They have been evacuated to District Hospital. More details awaited. (Visuals deferred by unspecified time) pic.twitter.com/zvK4ls05F3
— ANI (@ANI) October 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.