ಲಕ್ನೋ: ದೇಶದೆಲ್ಲೆಡೆ ಸಂಚಲನ ಮೂಡಿಸಿದ್ದ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪೊಲೀಸರು 4 ಜನರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಗೆ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯ ನಂಟಿರುವ ಬಗ್ಗೆಯೂ ಪೊಲೀಸರು ಸಂದೇಹ ವ್ಯಕ್ತಪಡಿಸಿದ್ದಾರೆ. ಹತ್ರಾಸ್ನಿಂದ ದೆಹಲಿಗೆ ತೆರಳುತ್ತಿದ್ದ ಇವರನ್ನು ಮಥುರಾದಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ. ದೆಹಲಿ-ಹತ್ರಾಸ್ ನಡುವೆ ಸಂಶಯಾಸ್ಪದವಾಗಿ ಕೆಲವು ವ್ಯಕ್ತಿಗಳು ಓಡಾಟ ನಡೆಸುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಟೋಲ್ ಪ್ಲಾಜಾ ಬಳಿಯಲ್ಲಿ ಈ ನಾಲ್ವರನ್ನು ಬಂಧನಕ್ಕೆ ಒಳಪಡಿಸಿದ ಬಗ್ಗೆಯೂ ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ಮುಜಾಫರ್ ನಗರದ ಆತಿಕ್ ಉರ್ ರೆಹ್ಮಾನ್, ಮಲಪ್ಪುರಂನ ಸಿದ್ದಿಕಿ, ಬಹರೈಚ್ನ ಮಸೂದ್ ಅಹಮದ್, ರಾಮ್ಪುರಂನ ಆಲಂ ಎಂದು ಗುರುತಿಸಲಾಗಿದೆ. ಈ ನಾಲ್ವರಿಗೂ ಪಿಎಫ್ಐ ಸಂಘಟನೆತ ಜೊತೆಗೆ ಸಂಬಂಧ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಿಂದ ಲ್ಯಾಪ್ಟಾಪ್, ಮೊಬೈಲ್ ಫೋನ್ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.