ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಭಾರತೀಯ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರವಾದಿಗಳನ್ನು ಯಮಪುರಿಗೆ ಅಟ್ಟುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.
ಶೋಪಿಯಾನ್ ಜಿಲ್ಲೆಯ ಜೈನಪೋರಾದ ಸುಗಾನ್ನಲ್ಲಿ ಈ ಘಟನೆ ಸಂಭವಿಸಿದೆ. ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿಕೊಂಡು ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದ ಮಾಹಿತಿಯನ್ನು ಪಡೆದುಕೊಂಡಿದ್ದ ಭದ್ರತಾ ಪಡೆಗಳು ಈ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡು ಹಾರಾಟ ನಡೆದಿದ್ದು, ಇಬ್ಬರು ಉಗ್ರರ ಸಂಹಾರವಾಗಿದೆ.
ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತೆ ಶೋಧಕಾರ್ಯ ಮುಂದುವರೆಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಇತ್ತೀಚಿನ ದಿನಗಳಲ್ಲಿ ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕಿಸ್ಥಾನ ಪ್ರೇರಿತ ಉಗ್ರರ ಉಪಟಳ ಹೆಚ್ಚುತ್ತಿದ್ದು, ಇದಕ್ಕೆ ಸಮರ್ಥ ಪ್ರತ್ಯುತ್ತರವನ್ನು ಭಾರತೀಯ ಸೇನೆ ನೀಡುತ್ತಲೇ ಬರುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.