ನ್ಯೂಯಾರ್ಕ್: ಕೊರೋನಾ ಸೋಂಕಿಗೆ ತುತ್ತಾದ ವಿಶ್ವದ ಹಲವು ರಾಷ್ಟ್ರಗಳು ಸಂಕಷ್ಟದಿಂದ ನಲುಗುವಂತಾಗಿದೆ. ಇದೇ ಸಂದರ್ಭದಲ್ಲಿ ಕೊರೋನಾ ಲಸಿಕೆ ಈ ವರ್ಷದ ಅಂತ್ಯದ ವೇಳೆಗೆ ಸಿದ್ಧವಾಗುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಸಾಂಕ್ರಾಮಿಕ ರೋಗಗಳ ಕಾರ್ಯಕಾರಿ ಮಂಡಳಿಯ ಎರಡು ದಿನಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ಎಂಬ ಜೀವಕ್ಕೆ ಹಾನಿಕಾರಕವಾದ ರೋಗಕ್ಕೆ ಲಸಿಕೆ ನಮ್ಮ ಸದ್ಯದ ಅಗತ್ಯತೆಯಾಗಿದೆ. ಈ ವರ್ಷದ ಕೊನೆಯಲ್ಲಿ ಲಸಿಕೆ ಸಿದ್ಧವಾಗುವ ಭರವಸೆಯನ್ನೂ ಅವರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಾಯೋಗಿಕ ಹಂತದಲ್ಲಿ 9 ಲಸಿಕೆಗಳಿವೆ. ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ ನೇತೃತ್ವದಲ್ಲಿ ಈ ವರ್ಷಾಂತ್ಯದಲ್ಲಿ 2 ಮಿಲಿಯನ್ ಡೋಸೇಜ್ ಗಳಷ್ಟು ಕೊರೋನಾ ವ್ಯಾಕ್ಸಿನ್ ವಿತರಣೆ ಮಾಡುವ ಗುರಿ ಇದೆ ಎಂದೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.