ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಮರಣ ಪ್ರಮಾಣ ನಿಯಂತ್ರಣಕ್ಕೆ ಪೂರಕ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಕೊರೋನಾ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ ಅವರು ಕೊರೋನಾ ನಿಯಂತ್ರಣ ಮಾಡಲು ಪೂರಕ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಕೊರೋನಾ ತಡೆಗೆ ಸರ್ಕಾರ ಜಾರಿಗೊಳಿಸಿದ ನಿಯಮಗಳ ಪಾಲನೆ ಮಾಡದವರ ಮೇಲೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಯಾವುದೇ ಮುಲಾಜಿಲ್ಲದೆ ನಡೆಸಬೇಕು. ಅದರಂತೆ ಮಾಸ್ಕ್ ಧರಿಸುವುದನ್ನು ಜನರು ಕಡ್ಡಾಯವಾಗಿ ಅನುಸರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿ ತಿಳಿಸಿದ್ದಾರೆ. ಹಾಗೆಯೇ ಸಾಮಾಜಿಕ ಅಂತರ ಪಾಲನೆಗೂ ಕಡ್ಡಾಯವಾಗಿ ಕ್ರಮ ಕೈಗೊಳ್ಳುವಂತೆ ಆವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅದರಂತೆ ಕೊರೋನಾ ತಪಾಸಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗೆಗೂ ಮುಖ್ಯಮಂತ್ರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿಗೆ ಅನುಗುಣವಾಗಿ ಮತ್ತಷ್ಟು ಚಟುವಟಿಕೆಗಳು ಆರಂಭವಾಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.