ಬೆಂಗಳೂರು: ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಆದರೂ ಕೆಲವರು ಮಾಸ್ಕ್ ಹಾಕದೆ ರಸ್ತೆಗೆ ಇಳಿಯುತ್ತಿದ್ದಾರೆ. ಸಾರ್ವಜನಿಕವಾಗಿ ಮಾಸ್ಕ್ ಧರಿಸದೆ ಓಡಾಡುವವರಿಗೆ ವಿಧಿಸಲಾಗಿದ್ದ ದಂಡದ ಮೊತ್ತವನ್ನು ಈಗ ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೊರೋನಾ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮೊದಲಾದ ಯಾವ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದು ಕಂಡುಬರುತ್ತಿಲ್ಲ. ಆದ್ದರಿಂದ ಕೊರೋನಾ ಹೆಚ್ಚು ತೀವ್ರವಾಗಿ ವ್ಯಾಪಿಸಲು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ನಗರ ಪ್ರದೇಶಗಳಲ್ಲಿ 1000 ರೂ., ಗ್ರಾಮೀಣ ಭಾಗದಲ್ಲಿ 500 ರೂ. ದಂಡ ವಿಧಿಸಲು ಸರ್ಕಾರ ಕ್ರಮ ಕೈಗೊಂಡಿತ್ತು. ಇದೀಗ ದಂಡದ ಮೊತ್ತವನ್ನು ನಗರ ಪ್ರದೇಶಗಳಲ್ಲಿ 1000 ದಿಂದ 250 ರೂ.ಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 500 ರಿಂದ 100 ರೂ. ಗಳಿಗೆ ಇಳಿಸಿ ಆದೇಶ ಹೊರಡಿಸಿದೆ.
ಜೊತೆಗೆ ಕೊರೋನಾ ನಿಯಂತ್ರಣ ಮಾಡಬೇಕಾದರೆ ಸರ್ಕಾರದ ಜೊತೆಗೆ ಸಾರ್ವಜನಿಕರು ಕೈ ಜೋಡಿಸುವುದು ತೀರಾ ಅಗತ್ಯ. ಇಂತಹ ಸ್ಥಿತಿಯಲ್ಲಿ ಜನರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಹೋದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತದೆ. ಆದ್ದರಿಂದ ಸರ್ಕಾರ ಸೂಚಿಸಿದ ಎಲ್ಲಾ ರೀತಿಯ ಕೊರೋನಾ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.