ನವದೆಹಲಿ: ಶ್ರೀ ಮಾತಾ ವೈಷ್ಣೋ ದೇವಿಯ ಭಕ್ತರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದ ಕತ್ರಾಗೆ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕಾರ್ಯಾಚರಣೆಯನ್ನು ಪುನರಾರಂಭಗೊಳಿಸಲಿದೆ. ಕೊರೊನಾವೈರಸ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.
ದೆಹಲಿಯಿಂದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಸಮೀಪದಲ್ಲಿರುವ ಪಟ್ಟಣವಾದ ಕಾತ್ರಾಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ಹೇಳಿದ್ದಾರೆ.
ನವರಾತ್ರಿ ಉತ್ಸವಕ್ಕೂ ಮುನ್ನ ಕತ್ರಾಗೆ ರೈಲು ಪುನರಾರಂಭಿಸುವ ಕುರಿತು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಚರ್ಚಿಸಿದ ನಂತರ ಸಿಂಗ್ ಅವರ ಹೇಳಿಕೆ ಹೊರಬಿದ್ದಿದೆ.
“ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಚರ್ಚಿಸಿದ್ದೇವೆ. ವಂದೇಭಾರತ್ ಎಕ್ಸ್ಪ್ರೆಸ್ ರೈಲು ದೆಹಲಿಯಿಂದ ವೈಷ್ಣೋ ದೇವಿಗೆ ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ. ಇದು ನವರಾತ್ರಿ ಹಬ್ಬದ ಸಂದರ್ಭದಲ್ಲಿ ಪವಿತ್ರ ದೇಗುಲಕ್ಕೆ ಭೇಟಿ ನೀಡಲು ಯೋಜಿಸುತ್ತಿರುವ ದೇಶಾದ್ಯಂತದ ಯಾತ್ರಾರ್ಥಿಗಳಿಗೆ ಉತ್ಸಾಹ ತುಂಬುವ ಮಾಹಿತಿಯಾಗಿದೆ” ಎಂದು ಸಿಂಗ್ ಟ್ವಿಟ್ ಮಾಡಿದ್ದಾರೆ. ಸಿಂಗ್ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ ಸಂಸದನೂ ಆಗಿದ್ದಾರೆ.
Discussed with Railway Minister Sh @PiyushGoyal . #VandeBharatExpress train from Delhi to #KatraVaishnoDevi to resume soon.
This should be a reassuring piece of information for pilgrims from across the country planning a visit to Holy shrine during #Navratri festival.— Dr Jitendra Singh (@DrJitendraSingh) October 8, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.