ನವದೆಹಲಿ: ಕೇಂದ್ರ ಸಚಿವ ಹಾಗೂ ಲೋಕಜನಶಕ್ತಿ ಪಕ್ಷದ ಮುಖಂಡರಾದ ರಾಮ್ ವಿಲಾಸ್ ಪಾಸ್ವಾನ್ ಅವರು ಇಂದು ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
74 ವರ್ಷ ವಯಸ್ಸಿನ ಪಾಸ್ವಾನ್ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ದೇಶದ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದರು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು ಎಂದು ಹೇಳಲಾಗಿದೆ.
ಪಾಸ್ವಾನ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವಿಟ್ ಮಾಡಿರುವ ಮೋದಿ, “ಒಟ್ಟಾಗಿ ಹೆಗಲಿಗೆ ಹೆಗಲು ಕೊಟ್ಟು ಪಾಸ್ವಾನ್ ಅವರೊಂದಿಗೆ ಕಾರ್ಯನಿರ್ವಹಿಸಿದ್ದು ನಿಜಕ್ಕೂ ಅದ್ಭುತ ಅನುಭವ. ಸಂಪುಟ ಸಭೆಯ ಸಂದರ್ಭದಲ್ಲಿ ಅವರ ಉಪಸ್ಥಿತಿ ನಿಜಕ್ಕೂ ಫಲಪ್ರದವಾಗುತ್ತಿತ್ತು. ರಾಜಕೀಯ ಚಾಣಾಕ್ಷತೆ, ಧೀಮಂತ ನಾಯಕತ್ವ, ಆಡಳಿತ ವಿಷಯಗಳ ಬಗ್ಗೆ ಅವರು ತಜ್ಞತೆ ಹೊಂದಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ. ಓಂ ಶಾಂತಿ” ಎಂದಿದ್ದಾರೆ.
I am saddened beyond words. There is a void in our nation that will perhaps never be filled. Shri Ram Vilas Paswan Ji’s demise is a personal loss. I have lost a friend, valued colleague and someone who was extremely passionate to ensure every poor person leads a life of dignity. pic.twitter.com/2UUuPBjBrj
— Narendra Modi (@narendramodi) October 8, 2020
Shri Ram Vilas Paswan Ji rose in politics through hardwork and determination. As a young leader, he resisted tyranny and the assault on our democracy during the Emergency. He was an outstanding Parliamentarian and Minister, making lasting contributions in several policy areas. pic.twitter.com/naqx27xBoj
— Narendra Modi (@narendramodi) October 8, 2020
Working together, shoulder to shoulder with Paswan Ji has been an incredible experience. His interventions during Cabinet Meetings were insightful. From political wisdom, statesmanship to governance issues, he was brilliant. Condolences to his family and supporters. Om Shanti.
— Narendra Modi (@narendramodi) October 8, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.