ನವದೆಹಲಿ: ಅಗಲಿದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ , ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವಾರು ಗಣ್ಯರು ಇಂದು ಅಂತಿಮ ನಮನ ಸಲ್ಲಿಸಿದರು.
ನವದೆಹಲಿಯ ಪಾಸ್ವಾನ್ ನಿವಾಸದಲ್ಲಿ ಅವರ ಪಾರ್ಥಿವ ಶರೀರವನ್ನು ಇಡಲಾಗಿದೆ. ಅಲ್ಲಿಗೆ ಆಗಮಿಸಿದ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.
ಏಮ್ಸ್ ಆಸ್ಪತ್ರೆಯಿಂದ ಇಂದು ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ನಿನ್ನೆ ರಾತ್ರಿ ಅವರು ಕೊನೆಯುಸಿರೆಳೆದಿದ್ದರು.
ಪಾಸ್ವಾನ್ ನಿಧನದ ಕಾರಣದಿಂದಾಗಿ ರಾಷ್ಟ್ರಪತಿ ಭವನ ಮತ್ತು ಸಂಸತ್ತಿನ ಮೇಲೆ ಹಾರುತ್ತಿದ್ದ ರಾಷ್ಟ್ರಧ್ವಜವನ್ನು ಇಂದು ಅರ್ಧಕ್ಕೆ ಇಳಿಸಲಾಗಿದೆ.
#WATCH Delhi: Prime Minister Narendra Modi pays last respects to Union Minister and LJP leader Ram Vilas Paswan at the latter’s residence.
The LJP leader passed away yesterday. pic.twitter.com/rDgRrHl7aT
— ANI (@ANI) October 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.