ನವದೆಹಲಿ: ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಹಿನ್ನಲೆಯಲ್ಲಿ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರಿಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಗೋಯಲ್ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿದ್ದಾರೆ. ಇದೀಗ ಅವರಿಗೆ ಮತ್ತೊಂದು ಖಾತೆಯ ಜವಾಬ್ದಾರಿಯನ್ನೂ ನೀಡಲಾಗಿದೆ.
ಪಾಸ್ವಾನ್ ಅವರು ಎನ್ಡಿಎ ಮೈತ್ರಿ ಪಕ್ಷ ಎಲ್ಜೆಪಿಯ ಮುಖಂಡರಾಗಿದ್ದರು. ಗುರುವಾರ ರಾತ್ರಿ ನಿಧನರಾಗಿದ್ದಾರೆ. ಇಂದು ಅವರ ಪಾರ್ಥಿವ ಶರೀರಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಪಿಯೂಶ್ ಗೋಯಲ್ ಸೇರಿದಂತೆ ಅನೇಕರು ಅಂತಿಮ ಗೌರವವನ್ನು ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.