ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಒಂದು ವಾರದಲ್ಲಿಯೇ ರಾಜ್ಯದಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ, ಗುಟ್ಕಾ ಮತ್ತು ತಂಬಾಕು ಮಾರಾಟ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲಿದೆ ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ ವಿ ರಾಮಣ್ಣ ರೆಡ್ಡಿ, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮಾಹಿತಿ ನೀಡಿದ್ದಾರೆ.
ಈ ಇಬ್ಬರೂ ಅಧಿಕಾರಿಗಳು ರಾಜಭವನದಲ್ಲಿ ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಭೇಟಿಯ ವೇಳೆ ಜುಲೈ 31 ರಂದು ತಂಬಾಕು, ಗುಟ್ಕಾ ಮತ್ತು ತಂಬಾಕು ಮಿಶ್ರಿತ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ರಾಜ್ಯಪಾಲರು ನಡೆಸಿದ್ದ ಸಭೆಗೆ ಸಂಬಂಧಿಸಿದಂತೆ ಆಗಿರುವ ಬೆಳವಣಿಗೆಗಳ ಸಂಬಂಧ ವರದಿ ಸಲ್ಲಿಸಿದ್ದಾರೆ.
ಹಾಗೆಯೇ, ಡ್ರಗ್ಸ್ ಮಾರಾಟ ಜಾಲ ಪತ್ತೆಗೂ ಸರ್ಕಾರ ಪೂರಕ ಕ್ರಮ ಕೈಗೊಳ್ಳಲಿದೆ. ಜೊತೆಗೆ ರಾಜ್ಯದಲ್ಲಿ ಈ ವರೆಗೆ ವಶಪಡಿಸಿಕೊಂಡಿರುವ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆಯೂ ಈ ವೇಳೆ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.