ಸ್ಟಾಕ್ಹೋಮ್: ಪ್ರಸಕ್ತ ವರ್ಷದ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ವಿಶ್ವ ಸಂಸ್ಥೆಯ ಭಾಗವಾಗಿರುವ ವಿಶ್ವ ಆಹಾರ ಯೋಜನೆ(ಡಬ್ಲ್ಯು ಎಫ್ಪಿ) ಯನ್ನು ಆಯ್ಕೆ ಮಾಡಲಾಗಿದೆ.
ಡಬ್ಲ್ಯು ಎಫ್ಪಿಯು ಹಸಿವು ನೀಗಿಸಲು ತೆಗೆದುಕೊಂಡಿರುವ ಕ್ರಮಗಳು, ಪ್ರಯತ್ನಗಳನ್ನು ಗಮನಿಸಿ ಈ ಪುರಸ್ಕಾರವನ್ನು ನೀಡಲು ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಘರ್ಷಣೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಸಂಬಂಧಿಸಿದಂತೆಯೂ ಸಂಸ್ಥೆ ಮಹತ್ವದ ಪಾತ್ರ ವಹಿಸಿದೆ. ಅದರಂತೆ ಯುದ್ಧದ ಅಸ್ತ್ರವಾಗಿ ಹಸಿವನ್ನು ಬಳಸುವ ಕ್ರಮಗಳನ್ನು ಸಂಸ್ಥೆ ತಪ್ಪಿಸಿದೆ ಎಂದು ನೊಬೆಲ್ ಸಂಸ್ಥೆ ತಿಳಿಸಿದೆ.
ಈ ಬಾರಿ ನೊಬೆಲ್ ಶಾಂತಿ ಪ್ರಶಸ್ತಿಗೆ 107 ಸಂಸ್ಥೆಗಳು, 211 ವ್ಯಕ್ತಿಗಳು ನಾಮನಿರ್ದೇಶಿತವಾಗಿದ್ದವು. ಈ ಪ್ರಶಸ್ತಿಯು 8 ಕೋಟಿ ರೂ. ನಗದು ಮತ್ತು ಚಿನ್ನದ ಪದಕವನ್ನು ಒಳಗೊಂಡಿರಲಿದೆ. ಪ್ರಶಸ್ತಿ ಪ್ರಧಾನ ಸಮಾರಂಭ ನಾರ್ವೆಯಲ್ಲಿ ಡಿಸೆಂಬರ್ 10ರಂದು ನಡೆಯಲಿದೆ.
BREAKING NEWS:
The Norwegian Nobel Committee has decided to award the 2020 Nobel Peace Prize to the World Food Programme (WFP).#NobelPrize #NobelPeacePrize pic.twitter.com/fjnKfXjE3E— The Nobel Prize (@NobelPrize) October 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.