ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚಿಂಗಂ ಪ್ರದೇಶದಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಶನಿವಾರ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಸಂಹಾರ ಮಾಡಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.
ಚಿಂಗಂ ಗ್ರಾಮದಲ್ಲಿ ಶನಿವಾರ ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಭುಗಿಲೆದ್ದಿತು. ಕೆಲವು ಭಯೋತ್ಪಾದಕರ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆದ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು 1 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ತಂಡವು ಜಂಟಿ ಶೋಧ-ಕಾರ್ಯಾಚರಣೆಯನ್ನು ಈ ಪ್ರದೇಶದಲ್ಲಿ ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಜಂಟಿ ಶೋಧನಾ ತಂಡವು ಸ್ಥಳವನ್ನು ಸುತ್ತುವರೆದಾಗ ಅಡಗಿ ಕುಳಿತಿದ್ದ ಭಯೋತ್ಪಾದಕರು ಶೋಧ ತಂಡದ ಮೇಲೆ ಗುಂಡು ಹಾರಿಸಿದರು. ಇದಕ್ಕೆ ಉತ್ತರವಾಗಿ ಯೋಧರು ಪ್ರತಿದಾಳಿ ನಡೆಸಿದ್ದಾರೆ.
ಇಡೀ ಪ್ರದೇಶವನ್ನು ಈಗ ಯೋಧರು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಭಯೋತ್ಪಾದಕರು ಕತ್ತಲೆಯ ಲಾಭವನ್ನು ಪಡೆದುಕೊಳ್ಳದಂತೆ ಮತ್ತು ಸ್ಥಳದಿಂದ ಪಲಾಯನ ಮಾಡದಂತೆ ಖಚಿತಪಡಿಸಿಕೊಳ್ಳಲು ಪಡೆಗಳು ಬ್ಯಾಟರಿ ದೀಪಗಳನ್ನು ಸ್ಥಳದಲ್ಲಿ ಹಾಕಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.