ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದೆ. ಈ ನಡುವೆ ಶಾಲಾ ಕಾಲೇಜುಗಳನ್ನು ಆರಂಭ ಮಾಡುವ ಯಾವುದೇ ಇರಾದೆ ಸರ್ಕಾರಕ್ಕೆ ಇಲ್ಲ. ಈ ಸಂಬಂಧ ವಿದ್ಯಾರ್ಥಿಗಳು, ಪೋಷಕರೂ ಸಹ ಆತಂಕಿತರಾಗಿದ್ದಾರೆ. ಶಾಲಾರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಮಕ್ಕಳ ಆರೋಗ್ಯ ಸರ್ಕಾರಕ್ಕೆ ಮುಖ್ಯ. ಆದ್ದರಿಂದ ಕೊರೋನಾ ನಡುವೆ ಶಾಲೆ ಆರಂಭ ಮಾಡುವುದರ ಸಂಬಂಧ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ತಜ್ಞರು, ಎಲ್ಲಾ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಸಾಧಕ ಬಾಧಕಗಳ ಬಗೆಗೂ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಶಾಲಾರಂಭಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಅವುಗಳನ್ನು ನಂಬದಂತೆಯೂ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಈ ಸಂಬಂಧ ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿಯೂ ವಿನಂತಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.
ಮಕ್ಕಳ ಆರೋಗ್ಯ, ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ, ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆ ಕರೆದು, ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೆ ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ @BSYBJP ರವರು ಪೋಷಕರಿಗೆ ಮನವಿ ಮಾಡಿದ್ದಾರೆ. pic.twitter.com/QKxTFxiO6m
— CM of Karnataka (@CMofKarnataka) October 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.