ಬೆಂಗಳೂರು: ಆನ್ಲೈನ್ ಶಿಕ್ಷಣವು ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಲು ಗ್ರಾಮೀಣ ಸರ್ಕಾರಿ ಕಾಲೇಜುಗಳಿಗೆ ಶೀಘ್ರದಲ್ಲೇ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರಸ್ತುತ ಆನ್ಲೈನ್ ಶಿಕ್ಷಣವು ಎಲ್ಲಾ ವಿದ್ಯಾರ್ಥಿಗಳನ್ನು ತಲುಪುತ್ತಿಲ್ಲ ಎಂಬ ಕಾರಣಕ್ಕಾಗಿ, ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಕಲಿಕೆ ನಿರ್ವಹಣಾ ವ್ಯವಸ್ಥೆ ನಿರ್ವಹಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಸುಮಾರು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಅವುಗಳಲ್ಲಿ 75 ಕಾಲೇಜುಗಳು ನಗರ ಭಾಗದಲ್ಲಿದ್ದರೆ, ಉಳಿವು ಗ್ರಾಮ ಪ್ರದೇಶಕ್ಕೆ ಸಂಬಂಧಿಸಿವೆ.
ಈ ಕಾಲೇಜುಗಳಿಗೆ ಹೊಸ ವ್ಯವಸ್ಥೆಯಲ್ಲಿ ಪಿಪಿಟಿಗೆ ಹೆಚ್ಚುವರಿಯಾಗಿ ಸಾಮಾನ್ಯ ತರಗತಿಗಳಿಗೆ ವಿಡಿಯೋ, ಅಧ್ಯಯನ ಸಾಮಗ್ರಿಗಳನ್ನು ಹೆಚ್ಚುವರಿಯಾಗಿ ನೀಡಲಿದೆ. ವಿದ್ಯಾರ್ಥಿಗಳಿಗೆ ವಿವಿಧ ಪ್ರಶ್ನಾವಳಿಗಳನ್ನು ನೀಡುವ ಮೂಲಕ ಅವರನ್ನು ಪರಿಶೀಲನೆ ಮಾಡಲಾಗುತ್ತದೆ. ಈ ಫ್ಲ್ಯಾಟ್ಫಾರ್ಮ್ನ ಆಫ್ಲೈನ್ನಲ್ಲಿ ಬಳಸಲು ಸಾಧ್ಯವಾಗುವಂತೆ ಇಂಟರ್ನೆಟ್ ಸೌಲಭ್ಯ ನೀಡಲು ಮುಂದಾಗಿರುವ ಶಿಕ್ಷಣ ಇಲಾಖೆ ಮುಂದಾಗಿದೆ. ಆ ಮೂಲಕ ಪಠ್ಯ, ವಿಡಿಯೋ ಡೌನ್ಲೋಡ್ ಮಾಡಿಕೊಳ್ಳಲು ಇದು ಪೂರಕವಾಗಲಿದೆ.
ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯೂಟ್ಯೂಬ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಲು ಮತ್ತು ವಾಟ್ಸಾಪ್, ಟೆಲಿಗ್ರಾಂ ನಂತಹ ಮೆಸೇಜಿಂಗ್ ಆಪ್ಗಳಲ್ಲಿ ಉಪನ್ಯಾಸ, ಟಿಪ್ಪಣಿ ಹಂಚಿಕೆಗೂ ಉಪನ್ಯಾಸಕರು ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ 85% ದಷ್ಟು ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.