ಬೆಂಗಳೂರು: ಶಿಕ್ಷಣ ವಲಯದಲ್ಲಿ ಸರ್ಕಾರಿ ಶಾಲಾ ಬಡ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾದ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವ ಸುರೇಶ್ ಕುಮಾರ್ ನಿರ್ದೇಶಿಸಿದ್ದಾರೆ.
ವಿದ್ಯಾಗಮದ ಮೂಲಕ ಕೊರೋನಾ ಹರಡುವ ಸಾಧ್ಯತೆ ಇದೆ ಎಂಬುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ನೀಡಿ ಈ ಕ್ರಮಕ್ಕೆ ಮುಂದಾಗಿದ್ದು, ಈ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕಲು ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಅದರಂತೆ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳ ಸ್ವೀಕಾರ ಮತ್ತು ಅದರ ಸಮರ್ಪಕ ವಿಶ್ಲೇಷಣೆಯು ಸಂಪೂರ್ಣವಾಗುವವರೆಗೂ ಇದನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಲಾಕ್ಡೌನ್ನಿಂದಾಗಿ ಸ್ಥಗಿತವಾಗಿರುವ ಶಾಲೆಗಳು ಇನ್ನೂ ತೆರೆದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿ ಮಾಡಬಾರದು ಎಂಬ ಉದ್ದೇಶದಿಂದ ವಿದ್ಯಾಗಮ ಕಾರ್ಯಕ್ರಮ ಜಾರಿಗೊಳಿಸಿತು. ಆ ಮೂಲಕ ಬಡ ವಿದ್ಯಾರ್ಥಿಗಳ ಹಿತ ಕಾಪಾಡಿಕೊಳ್ಳುವ ಸಲುವಾಗಿ ಈ ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.