ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಫಾರೂಖ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಆಘಾತಕಾರಿಯಾದ ಹೇಳಿಕೆಯನ್ನು ನೀಡಿದ್ದಾರೆ. ಕಣಿವೆ ರಾಜ್ಯದಲ್ಲಿ 370ನೇ ವಿಧಿಯನ್ನು ಚೀನಾದ ಸಹಾಯದೊಂದಿಗೆ ಮತ್ತೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇಂಡಿಯಾ ಟುಡೇ ಟಿವಿಗೆ ಸಂದರ್ಶನ ನೀಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದು ಚೀನಾಗೆ ಇಷ್ಟವಾಗಿಲ್ಲ, ಹೀಗಾಗಿ ಅದು ಮರು ಜಾರಿಗೆ ಸಹಾಯ ಮಾಡುತ್ತದೆ ಎಂದಿದ್ದಾರೆ.
ಅಲ್ಲದೆ, “ಜಮ್ಮು ಮತ್ತು ಕಾಶ್ಮೀರ ದಲ್ಲಿ 370ನೇ ವಿಧಿ ಮತ್ತೆ ಸ್ಥಾಪನೆಯಾಗುವವರೆಗೂ ನಾವು ನಿಲ್ಲುವುದಿಲ್ಲ, ಈಗ ಅದು ಬಹಿರಂಗ ವಿಷಯವಾಗಿದೆ ಎಂಬುದಾಗಿ ಚೀನಿಯರು ನನ್ನ ಬಳಿ ಹೇಳಿಕೊಂಡಿದ್ದಾರೆ” ಎಂದಿದ್ದಾರೆ.
ಚೀನಾ ಮತ್ತು ಭಾರತದ ನಡುವೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಈ ಸಂದರ್ಭದಲ್ಲಿ ಫಾರೂಖ್ ಅಬ್ದುಲ್ಲಾ ಅವರು ನೀಡಿದ ಹೇಳಿಕೆ ದೊಡ್ಡ ವಿವಾದ ಸೃಷ್ಟಿಸಿದೆ. ಅದರಲ್ಲೂ ಭಾರತದ ಭೂ ಪ್ರದೇಶವೊಂದರ ವಿಷಯದಲ್ಲಿ ಚೀನಾ ಮಧ್ಯಪ್ರವೇಶ ಮಾಡಬೇಕು ಎಂಬಂತಹ ಹೇಳಿಕೆಯನ್ನು ಫಾರೂಖ್ ಅಬ್ದುಲ್ಲಾ ಅವರು ನೀಡಿದ್ದು ಅವರ ದೇಶವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.