ಮುಂಬಯಿ: ದೇಶದ ವಾಣಿಜ್ಯ ನಗರಿ ಎಂದು ಕರೆಯಲ್ಪಡುವ ಮುಂಬೈ ಇಂದು ಬೆಳಗ್ಗೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಪರದಾಡುತ್ತಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ವಿದ್ಯುತ್ ಸಂಪರ್ಕ ಮುಂಬೈ ಮಹಾನಗರ ಮತ್ತು ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಡಿತಗೊಂಡಿದೆ.
ಮುಂಬೈ ನಗರ, ಉಪನಗರ, ಥಾಣೆ, ಪಾಲ್ಘಡ್ ಮತ್ತು ರಾಯಘಡಗಳಲ್ಲಿ ವಿದ್ಯುತ್ ಕಡಿತವಾಗಿದೆ. ಈ ಕಾರಣದಿಂದಾಗಿ ಕೇಂದ್ರ ರೈಲ್ವೆ ಮತ್ತು ಪಶ್ಚಿಮ ರೈಲ್ವೆ ನಡುವಿನ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ.
ಟ್ರಾಫಿಕ್ ಸಿಗ್ನಲ್ಗಳೂ ಕೂಡ ಕಾರ್ಯನಿರ್ವಹಿಸುವುದನ್ನು ಸ್ಥಗಿತಗೊಳಿಸಿವೆ. ಆದರೆ ಅದೃಷ್ಟವಶಾತ್ ಆಸ್ಪತ್ರೆಗಳಲ್ಲಿ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಮಹಾರಾಷ್ಟ್ರ ರಾಜ್ಯ ವಿದ್ಯುತ್ ಪ್ರಸರಣ ಕಂಪನಿಯ 400 ಕೆ.ವಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದ ಕಾರಣದಿಂದಾಗಿ ವಿದ್ಯುತ್ ಪೂರೈಕೆಯ ಮೇಲೆ ಪರಿಣಾಮ ಬೀರಿದೆ ಎಂದು ಮಹಾರಾಷ್ಟ್ರದ ಇಂಧನ ಸಚಿವರು ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯುತ್ ವ್ಯತ್ಯಯಕ್ಕೆ ಭಾರಿ ಆಕ್ರೋಶಗಳು ಭುಗಿಲೆದ್ದಿವೆ. ಸರ್ಕಾರದ ನಿಷ್ಕ್ರಿಯತೆಯನ್ನು ಜನರು ಪ್ರಶ್ನೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.