ಬೆಂಗಳೂರು: ಕರ್ನಾಟಕ ಸಚಿವ ಸಂಪುಟದಲ್ಲಿ ಕೆಲವು ಮಹತ್ವದ ಬದಲಾವಣೆಗಳು ನಡೆದಿವೆ. ಬಿ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ ಮತ್ತು ಡಾ. ಕೆ ಸುಧಾಕರ್ ಅವರಿಗೆ ಆರೋಗ್ಯ ಖಾತೆ ನೀಡಲಾಗಿದೆ.
ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಬಳಿ ಲೋಕೋಪಯೋಗಿ ಖಾತೆ ಉಳಿದುಕೊಂಡಿದ್ದು, ರಾಮುಲು ಬಳಿಯಿದ್ದ ಹಿಂದುಳಿದ ವರ್ಗಗಳ ಖಾತೆಯನ್ನು ಮುಖ್ಯಮಂತ್ರಿ ತಮ್ಮ ಬಳಿ ಇಟ್ಟು ಕೊಂಡಿದ್ದಾರೆ.
ಸುಧಾಕರ್ ಅವರಿಗೆ ವೈದ್ಯಕೀಯ ಹಿನ್ನೆಲೆ ಜೊತೆಗೆ ಸಂವಹನದ ಕೌಶಲ್ಯ ಇರುವುದರಿಂದ ಅವರಿಗೆ ಆರೋಗ್ಯ ಖಾತೆ ನೀಡಿ, ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿರುವುದರಿಂದ ಈ ಬದಲಾವಣೆ ಮಹತ್ವ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.