ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಇದೀಗ ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ತೀರ ಹಿಂದುಳಿದ ಪ್ರದೇಶಗಳ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳು ವಾಸಿಸುವ ಪ್ರದೇಶಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಕೊಡಾಳಕೇರಿಗೆ ಸಂಪರ್ಕ ಕಲ್ಪಿಸುವ ರೂ 40 ಲಕ್ಷ ರಸ್ತೆ ಕಾಮಗಾರಿಗೆ ಗುರುವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
ಈ ಪ್ರದೇಶದ ಎಲ್ಲ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸುವ ಭರವಸೆ ನೀಡಿದ ಅವರು, ಗಂಗಾನಾಡಿನಲ್ಲಿ ಮರಾಠಿ ಸಮುದಾಯದ ಉಪಯೋಗಕ್ಕೆ ರೂ. 10 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು. ಈ ಸಾಲಿನಲ್ಲಿ ಇನ್ನೂ 10 ಸಮುದಾಯ ಭವನ ನಿರ್ಮಾಣಕ್ಕೆ ಅನುಮೋದನ ಸಿಗಲಿದೆ ಎಂದು ಅವರು ನುಡಿದರು.
ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಗೌರಿದೇವಾಡಿಗ, ಸದಸ್ಯೆ ಸುಪ್ರೀತಾ ದೀಪಕ್ ಶೆಟ್ಟಿ, ತಾಪಂ ಸದಸ್ಯರಾದ ಎಸ್. ರಾಜು ಪೂಜಾರಿ, ಕೆ. ರಮೇಶ ಗಾಣಿಗ, ಮಾಜಿ ಸದಸ್ಯ ವಿಜಯಕುಮಾರ ಶೆಟ್ಟಿ, ಗ್ರಾಪಂ ಉಪಾಧ್ಯಕ್ಷ ಗಣಪತಿ, ಸ್ಥಳೀಯ ಪ್ರಮುಖರಾದ ಮಂಜಯ್ಯ ಪೂಜಾರಿ, ಗೌತಮ್ ಶೆಟ್ಟಿ, ಭೋಜ ನಾಯ್ಕ್, ಅಣ್ಣಪ್ಪ ಪೂಜಾರಿ, ಬಾಬು ಕೊಠಾರಿ, ಮುಂತಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.