ನವದೆಹಲಿ: ಅಕ್ಟೋಬರ್ 15 ರಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿಯ ಗುಹಾ ದೇಗುಲಕ್ಕೆ ದಿನಕ್ಕೆ 7,000 ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಅಕ್ಟೋಬರ್ 17 ರಿಂದ ಪ್ರಾರಂಭವಾಗುವ ‘ನವರಾತ್ರಿ’ ಹಿನ್ನೆಲೆಯಲ್ಲಿ ಯಾತ್ರಾ ವ್ಯವಸ್ಥೆಯನ್ನು ಪರಿಶೀಲಿಸಿದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಮೇಶ್ ಕುಮಾರ್ ಅವರು, ಅಕ್ಟೋಬರ್ 15 ರಿಂದ ದಿನಕ್ಕೆ 7,000 ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ. ಪ್ರಸ್ತುತ ದಿನಕ್ಕೆ 5,000 ಯಾತ್ರಿಕರಿಗೆ ಮಾತ್ರ ಭೇಟಿ ನೀಡಲು ಅವಕಾಶವಿದೆ.
ಯಾತ್ರಾ ನೋಂದಣಿ ಕೌಂಟರ್ಗಳಲ್ಲಿ ಜನಜಂಗುಳಿ ಸೇರುವುದನ್ನು ತಪ್ಪಿಸಲು ಯಾತ್ರಾರ್ಥಿಗಳ ನೋಂದಣಿ ಆನ್ಲೈನ್ನಲ್ಲಿ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಮಾತಾ ವೈಷ್ಣೋ ದೇವಿ ಭವನ, ಅಟ್ಕಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಹೂವಿನ ಅಲಂಕಾರದ ಕೆಲಸಗಳು ಪ್ರಾರಂಭವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.