ನವದೆಹಲಿ: ಪೂರ್ವ ಲಡಾಖ್ನಲ್ಲಿ ಚೀನಾದೊಂದಿಗೆ ಏರ್ಪಟ್ಟಿರುವ ಉದ್ವಿಗ್ನತೆ ನಡುವೆಯೂ, ಭಾರತವು ಗಡಿ ಪ್ರದೇಶಗಳಲ್ಲಿ ಸುಮಾರು 40-50 ಸೇತುವೆಗಳ ನಿರ್ಮಾಣ ಕಾರ್ಯವನ್ನು ಮಾಡುತ್ತಿದೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಹರ್ಪಾಲ್ ಸಿಂಗ್ ಈ ಮಾಹಿತಿಯನ್ನು ನೀಡಿದ್ದಾರೆ.
ಈ ಸೇತುವೆಗಳ ಕಾಮಗಾರಿ ಇನ್ನು ಆರು ತಿಂಗಳ ಒಳಗೆ ಪೂರ್ಣಗೊಳ್ಳಲಿದೆ ಎಂದು ಬಿಆರ್ಒ ಮಹಾನಿರ್ದೇಶಕರು ತಿಳಿಸಿದ್ದಾರೆ.
ಗಡಿ ರಾಜ್ಯಗಳು ಮತ್ತು ಭಾರತದ ಕೇಂದ್ರಾಡಳಿತ ಪ್ರದೇಶಗಳಲ್ಲಿ 44 ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
ರಕ್ಷಣಾ ಸಚಿವರು ಮೊನ್ನೆ ಉದ್ಘಾಟಿಸಿದ 44 ಸೇತುವೆಗಳಲ್ಲಿ 10 ಕೇಂದ್ರ ಜಮ್ಮು ಮತ್ತು ಕಾಶ್ಮೀರದಲ್ಲಿ, 8 ಲಡಾಖ್ನಲ್ಲಿ, ಹಿಮಾಚಲ ಪ್ರದೇಶದಲ್ಲಿ 2, ಪಂಜಾಬ್ನಲ್ಲಿ 4, ಉತ್ತರಾಖಂಡದಲ್ಲಿ 8 ಮತ್ತು ಸಿಕ್ಕಿಂನಲ್ಲಿ 4 ಇವೆ.
ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ BRO, ಭಾರತದ ಗಡಿ ಪ್ರದೇಶಗಳಲ್ಲಿ ಕಾರ್ಯತಂತ್ರದ ರಸ್ತೆಗಳು ಮತ್ತು ಸೇತುವೆಗಳ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿದೆ.
ಲಡಾಖ್ನಲ್ಲಿ ಹೆಚ್ಚಿನ ಸಂಖ್ಯೆಯ ಸೇತುವೆಗಳು ನಿರ್ಮಾಣ ಹಂತದಲ್ಲಿವೆ. ಸುಮಾರು 40-50 ಸೇತುವೆಗಳು ನಿರ್ಮಾಣ ಹಂತದಲ್ಲಿದ್ದು, ಇದು 6 ತಿಂಗಳಿಂದ ಒಂದೂವರೆ ವರ್ಷಗಳ ನಡುವೆ ಪೂರ್ಣಗೊಳ್ಳಲಿದೆ ”ಎಂದು ಲೆಫ್ಟಿನೆಂಟ್ ಜನರಲ್ ಹರ್ಪಾಲ್ ಸಿಂಗ್ ಹೇಳಿದ್ದಾರೆ.
ಭಾರತದ ಗಡಿಯಲ್ಲಿನ ಸೇತುವೆಗಳು ಉದ್ವಿಗ್ನತೆಯ ಸಮಯದಲ್ಲಿ ನಮಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಆರಂಭದಲ್ಲಿ ರೋಹ್ಟಂಗ್ ಸುರಂಗವನ್ನು ಉದ್ಘಾಟಿಸಿದ್ದರು. 10,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿರುವ ವಿಶ್ವದ ಅತಿ ಉದ್ದದ ಈ ಸುರಂಗವು ಲಡಾಖ್ಗೆ ಸೈನ್ಯ ಮತ್ತು ಸಲಕರಣೆಗಳ ಸಾಗಾಣೆಯನ್ನು ಸುಲಭಗೊಳಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.