ನವದೆಹಲಿ: ದೇಶದಲ್ಲಿ ಕೋವಿಡ್-19 ನಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 62 ಲಕ್ಷಕ್ಕಿಂತ ಹೆಚ್ಚಾಗಿದ್ದು, ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಸರ್ಕಾರ ಹೇಳಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಚೇತರಿಕೆ ಪ್ರಮಾಣವನ್ನು ಹೊಂದಿದ ರಾಷ್ಟ್ರವಾಗಿ ಈಗ ಹೊರಹೊಮ್ಮಿದೆ. ಚೇತರಿಕೆ ಪ್ರಮಾಣ ದೇಶದಲ್ಲಿ ಶೇಕಡಾ 86.78ರಷ್ಟು ಇದೆ.
ನಿನ್ನೆ ಸಂಜೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಸಕ್ರಿಯ ಪ್ರಕರಣಗಳು ಸ್ಥಿರವಾಗಿ ಕಡಿಮೆಯಾಗುವ ಪ್ರವೃತ್ತಿಯನ್ನು ಭಾರತ ವರದಿ ಮಾಡುತ್ತಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ದೇಶದ ಸಕ್ರಿಯ ಪ್ರಕರಣಗಳು 8, 38, 7, 29 ಆಗಿದೆ ಎಂದು ಅವರು ಹೇಳಿದರು. ಸಕ್ರಿಯ ಪ್ರಕರಣಗಳು ಸತತ 5 ನೇ ದಿನದಿಂದ 9 ಲಕ್ಷಕ್ಕಿಂತ ಕಡಿಮೆಯಾಗಿದೆ. ಕೋವಿಡ್-19 ಪರೀಕ್ಷೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಮತ್ತು ಮತ್ತೊಂದೆಡೆ, ಸಕಾರಾತ್ಮಕತೆಯ ಪ್ರಮಾಣದಲ್ಲೂ ನಿರಂತರ ಕುಸಿತ ಕಂಡು ಬರುತ್ತಿದೆ ಎಂದು ಅವರು ಹೇಳಿದ್ದಾರೆ.
ಸುಮಾರು ಶೇ.53 ಕೋವಿಡ್ ಸಾವುಗಳು 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ರೋಗಿಗಳಾಗಿದ್ದು, ಸುಮಾರು ಶೇ.35 ಸಾವುಗಳು 45 ರಿಂದ 60 ವರ್ಷದೊಳಗಿನ ರೋಗಿಗಳದ್ದಾಗಿದ್ದು ಮತ್ತು 26 ರಿಂದ 44 ವರ್ಷ ವಯಸ್ಸಿನವರಲ್ಲಿ 10 ಪ್ರತಿಶತದಷ್ಟು ಸಾವುಗಳು ಸಂಭವಿಸಿವೆ ಎಂದು ಅವರು ಹೇಳಿದ್ದಾರೆ. ಶೇ.30ರಷ್ಟು ಸಾವು ಮಹಿಳೆಯರದ್ದಾಗಿದ್ದರೆ ಮತ್ತು ಶೇ.70 ಸಾವು ಪುರುಷರದ್ದಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.