ನವದೆಹಲಿ: ಕೇಂದ್ರ ಸಶಸ್ತ್ರ ಪಡೆ (ಸಿಎಪಿಎಫ್)ಯ ಸಿಬ್ಬಂದಿಗಳಿಗೂ, ಅವರ ಕುಟುಂಬದ ಸದಸ್ಯರಿಗೂ ಆಯುಷ್ಮಾನ್ ಯೋಜನೆ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಆರೋಗ್ಯ ವಿಮಾ ಸೌಲಭ್ಯವನ್ನು ಶೀಘ್ರದಲ್ಲೇ ಸಿಎಪಿಎಫ್ ಸಿಬ್ಬಂದಿ ಪಡೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸಿಬ್ಬಂದಿಗಳಿಗೆ ಯೋಜನೆಯನ್ವಯ ನೀಡುತ್ತಿರುವ ಮೊದಲ ಉಪಕ್ರಮ ಇದಾಗಿದೆ. ಅರ್ಹ ಸಿಬ್ಬಂದಿಗಳಿಗೆ ಉಚಿತವಾಗಿ ಪ್ರಾಥಮಿಕ, ದ್ವಿತೀಯ ಮತ್ತು ತೃತೀಯ ಹಂತದ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಉಪಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದೂ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ.
ಗಡಿ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಸಶಸ್ತ್ರ ಸೀಮಾ ಬಲ,ಕೇಂದ್ರ ಮೀಸಲು ಪೊಲೀಸ್ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ರಾಷ್ಟ್ರೀಯ ಭದ್ರತಾ ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿಗಳು ಮತ್ತು ಅವರ ಕುಟುಂಬದವರಿಗೆ ಈ ಯೋಜನೆಯನ್ವಯ ಆರೋಗ್ಯ ವಿಮೆ ನೀಡಲು ಸರ್ಕಾರ ನಿರ್ಧರಿಸಿದೆ.
ಆರಂಭದ ಹಂತದಲ್ಲಿ ಇದನ್ನು ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ವಿಸ್ತರಿಸಲಾಗುವುದು. ನಂತರ ಸಂಪೂರ್ಣ ರಾಜ್ಯಕ್ಕೆ ಸಂಬಂಧಿಸಿದಂತೆ ಇದನ್ನು ಜಾರಿಗೆ ತರಲಾಗುತ್ತದೆ. ಇದರನ್ವಯ ಯಾವುದೇ ಸಿಜಿಎಚ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಇದರ ಅಡಿಯಲ್ಲಿ ದೇಶದಾದ್ಯಂತ ಎಲ್ಲಾ ಒಪಿಡಿ, ಐಪಿಡಿಗಳಲ್ಲಿ ಉಚಿತ ಚಿಕಿತ್ಸೆ, ಖಾಸಗಿ ಸಹಭಾಗಿತ್ವದ ಆಸ್ಪತ್ರೆಗಳಲ್ಲಿಯೂ ಪ್ರವೇಶಕ್ಕೆ ಅನುವು, ಸಿಬ್ಬಂದಿ, ಕುಟುಂಬಕ್ಕೆ ಚಿಕಿತ್ಸಾ ವೆಚ್ಚ ಉಚಿತ, ಈ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು 24/7 ಕಾಲ್ಸೆಂಟರ್, ಫಲಾನುಭವಿಗಳಿಗೆ ತಾವು ಮಾಡಿದ ಖರ್ಚು ಮಾಡಿದ ವೆಚ್ಚ ಮರುಪಾವತಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.