ನವದೆಹಲಿ: ವಿಶ್ವ ಬ್ಯಾಂಕಿನ ಆರ್ಥಿಕ ನೆರವಿನಡಿ ಒಟ್ಟು 5718 ಕೋಟಿ ರೂ.ಗಳ ವೆಚ್ಚದೊಂದಿಗೆ STARS (Strengthening Teaching-Learning and Results for States) ಯೋಜನೆಯನ್ನು ಅನುಷ್ಠಾನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಈ ಯೋಜನೆಯ ಉದ್ದೇಶ.
ಉತ್ತಮ ಶಿಕ್ಷಣ ಫಲಿತಾಂಶಗಳನ್ನು ಪಡೆಯುವ ಸಲುವಾಗಿ ಸುಧಾರಿತ ಶಿಕ್ಷಣವನ್ನು ಅಭಿವೃದ್ಧಿಪಡಿಸಲು, ಕಾರ್ಯಗತಗೊಳಿಸಲು, ಮೌಲ್ಯಮಾಪನ ಮಾಡಲು ಮತ್ತು ಸುಧಾರಿಸಲು ಯೋಜನೆಯು ರಾಜ್ಯಗಳನ್ನು ಬೆಂಬಲಿಸಲಿದೆ. ಕ್ಯಾಬಿನೆಟ್ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್, ಒಟ್ಟು ಯೋಜನೆಯ ವೆಚ್ಚ 5, 718 ಕೋಟಿ ರೂಪಾಯಿಗಳಾಗಿದ್ದು, ವಿಶ್ವಬ್ಯಾಂಕ್ನ ಆರ್ಥಿಕ ನೆರವು 500 ಮಿಲಿಯನ್ ಯುಎಸ್ ಡಾಲರ್ ಆಗಿದೆ ಎಂದಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಸ್ಟಾರ್ಸ್ ಯೋಜನೆಯನ್ನು ಹೊಸ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಜಾರಿಗೆ ತರಲಾಗುವುದು ಎಂದು ಜಾವಡೇಕರ್ ಹೇಳಿದ್ದಾರೆ. ಇದು ಆರು ರಾಜ್ಯಗಳು, ಹಿಮಾಚಲ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ಒಡಿಶಾವನ್ನು ಒಳಗೊಂಡಿದೆ. ಇದು ಮಹತ್ವದ ಮೈಲಿಗಲ್ಲು ಮತ್ತು ಹೊಸ ಶಿಕ್ಷಣ ನೀತಿಯ ಆರಂಭ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.